ಭಯೋತ್ಪಾದಕ ದಾಳಿ: ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಸಾವು
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಸೋಮವಾರ ಗಸ್ತು ಪಡೆ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಮೇಲೆ ಮಧ್ಯಾಹ್ನ 3:30 ರ ಸುಮಾರಿಗೆ ಬಸಂತ್‌ಗಢದ ದುಡು ಪ್ರದೇಶದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
187ನೇ ಬೆಟಾಲಿಯನ್‌ಗೆ ಸೇರಿದ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಇನ್ಸ್‌ಪೆಕ್ಟರ್‌ಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟರು ಎಂದು ಹೇಳಿದರು.ಜಂಟಿ ಗಸ್ತು ತಿರುಗುವ ತಂಡದಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದ್ದರಿಂದ, ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಉಗ್ರರ ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story