Cyclone Montha Threat: Tamil Nadu and Puducherry on High Alert Amid Heavy Rain Warning
x

ಸಾಂದರ್ಭಿಕ ಚಿತ್ರ

‘ಮೊಂಥಾ’ ಚಂಡಮಾರುತದ ಭೀತಿ: ತಮಿಳುನಾಡು, ಪುದುಚೇರಿಯಲ್ಲಿ ಹೈ ಅಲರ್ಟ್

ಚಂಡಮಾರುತವು ವಾಯವ್ಯ ದಿಕ್ಕಿನತ್ತ ಚಲಿಸಿ, ಅ. 28ರವರೆಗೂ ಮಳೆ ಸುರಿಯುವ ಸಾಧ್ಯತೆಯಿದೆ. ಥಾಯ್ಲೆಂಡ್‌ನ ಶಿಫಾರಸಿನಂತೆ ಈ ಚಂಡಮಾರುತಕ್ಕೆ 'ಮೊಂಥಾ' ಎಂದು ಹೆಸರಿಡಲಾಗಿದೆ.


Click the Play button to hear this message in audio format

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು 'ಮೊಂಥಾ' ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್ 27ರಂದು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಅಕ್ಟೋಬರ್ 25ರಂದು ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಿದ್ದು, ಅ. 26ರಂದು ಇದು ಮತ್ತಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯವ್ಯ ದಿಕ್ಕಿನತ್ತ ಚಲಿಸಿ, ಅ. 28ರವರೆಗೂ ಮಳೆ ಸುರಿಯುವ ಸಾಧ್ಯತೆಯಿದೆ. ಥಾಯ್ಲೆಂಡ್‌ನ ಶಿಫಾರಸಿನಂತೆ ಈ ಚಂಡಮಾರುತಕ್ಕೆ 'ಮೊಂಥಾ' ಎಂದು ಹೆಸರಿಡಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಕಟ್ಟೆಚ್ಚರ ವಹಿಸಿದ್ದು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪರಿಸ್ಥಿತಿಯನ್ನು ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ 215 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, 106 ಸಮುದಾಯ ಅಡುಗೆ ಕೋಣೆಗಳನ್ನು ಸಜ್ಜುಗೊಳಿಸಲಾಗಿದೆ. ರಕ್ಷಣಾ ಕಾರ್ಯಕ್ಕಾಗಿ 24,149 ಸಿಬ್ಬಂದಿ ಹಾಗೂ 103 ದೋಣಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ನೀರು ಹೊರಹಾಕಲು ಸಾವಿರಾರು ಪಂಪ್‌ಗಳು ಮತ್ತು ಮರಗಳನ್ನು ತೆರವುಗೊಳಿಸಲು 457 ಯಂತ್ರಗಳನ್ನು ಸಿದ್ಧಪಡಿಸಲಾಗಿದೆ.

Read More
Next Story