ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗಬಂಧನ ವಿಸ್ತರಣೆ
x

ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗಬಂಧನ ವಿಸ್ತರಣೆ

ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರಿಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಅವರು ಜಾಮೀನು ಬಾಂಡ್ ಸಲ್ಲಿಸದ ಕಾರಣ ತಿಹಾರ್ ಜೈಲಿನಲ್ಲಿದ್ದಾರೆ.


ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಗುರುವಾರ (ಜುಲೈ 25) ವಿಸ್ತರಿಸಿದೆ.

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರ ಕಸ್ಟಡಿಯನ್ನು ಇಡಿ ದಾಖಲಿಸಿದ ಪ್ರಕರಣದಲ್ಲಿ ಜುಲೈ 31ಕ್ಕೆ ಹಾಗೂ ಸಿಬಿಐ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಆಗಸ್ಟ್ 8 ರವರೆಗೆ ವಿಸ್ತರಿಸಿದರು.

ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ. ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.

ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಕೇಜ್ರಿವಾಲ್‌ ಅವರಿಗೆ ಇಡಿ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಜಾಮೀನು ಬಾಂಡ್ ಸಲ್ಲಿಸದ ಕಾರಣ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಸಿಬಿಐ ಪ್ರಕರಣದಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

Read More
Next Story