Delhi Polls : ಫೆಬ್ರುವರಿ 5ರಂದು ಡೆಲ್ಲಿ ಚುನಾವಣೆ, 8ರಂದು ಫಲಿತಾಂಶ
x
ಪ್ರಾತಿನಿಧಿಕ ಚಿತ್ರ.

Delhi Polls : ಫೆಬ್ರುವರಿ 5ರಂದು ಡೆಲ್ಲಿ ಚುನಾವಣೆ, 8ರಂದು ಫಲಿತಾಂಶ

Delhi Polls: ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 2015 ಮತ್ತು 2020 ರ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳನ್ನು ಗೆದ್ದುಕೊಂಡು ಸರ್ಕಾರ ರಚಿಸಿತ್ತು.


ಣೆ ನಡೆಯಲಿದೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತೀವ್ರ ತ್ರಿಕೋನ ಸ್ಪರ್ಧೆಯು ರಾಷ್ಟ್ರ ರಾಜಧಾನಿಯಲ್ಲಿ ರಾಜಕೀಯ ಜಿದ್ದು ಹೆಚ್ಚಿಸಿದ್ದು ಫೆಬ್ರವರಿ 8ರಂದು ಫಲಿತಾಂಶ ಹೊರಬೀಳಲಿದೆ.

ಚುನಾವಣಾ ಆಯೋಗವು ಮಂಗಳವಾರ ಚುನಾವಣಾ ವೇಳಾಪಟ್ಟಿ ಘೋಷಿಸುವುದರೊಂದಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಭ್ರಷ್ಟಾಚಾರದ ಆರೋಪಗಳ ಅಲೆಯ ವಿರುದ್ಧ ಹೋರಾಡುತ್ತಿರುವ ಆಡಳಿತಾರೂಢ ಎಎಪಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 2015 ಮತ್ತು 2020 ರ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳನ್ನು ಗೆದ್ದುಕೊಂಡು ಸರ್ಕಾರ ರಚಿಸಿತ್ತು.

ಕಳೆದ ಎರಡು ಚುನಾವಣೆಗಳಲ್ಲಿ ಕೇವಲ ಒಂದು ಅಂಕಿಗೆ ಕುಸಿದಿದ್ದ ಬಿಜೆಪಿ, 26 ವರ್ಷಗಳ ವಿರಾಮದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದೆ. ಒಂದು ಕಾಲದಲ್ಲಿ ದೆಹಲಿಯನ್ನು 15 ವರ್ಷಗಳ ಕಾಲ ಆಳಿದ್ದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕಾಗಿ ಹುಡುಕುತ್ತಿದೆ. 2024ರ ಲೋಕಸಭಾ ಚುನಾವಣೆಗೆ ಎಎಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್‌ ಈ ಬಾರಿ ಏಕಾಂಗಿಯಾಗಿ ಸ್ಪರ್ಧಿಸಲಿದೆ.

2025ರ ಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ವಿಷಯವಾಗಿದೆ. ಕಳೆದ ವರ್ಷ, ಮದ್ಯ ನೀತಿ ಪ್ರಕರಣದಲ್ಲಿ ಜೇಲು ಸೇರಿದ್ದ ಆಪ್‌ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಆ ಬಳಿಕ ಜಾಮೀನು ಪಡೆದಯ ಹೊರ ಬಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ದೆಹಲಿಯ ಜನರು ತಮ್ಮ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಿದರೆ ನಾನು ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂದು ಶಪಥ ಮಾಡಿದ್ದರು. ಈ ಬಾರಿ, ಆಡಳಿತ ವಿರೋಧಿ ಅಲೆ ಮತ್ತು ಅದರ ಪ್ರತಿಸ್ಪರ್ಧಿಗಳನ್ನು ಸೋಲಿಸಲು ಪಕ್ಷವು ಮಹಿಳೆಯರು ಮತ್ತು ವೃದ್ಧರನ್ನು ಸೆಳೆಯಲು ಹಲವಾರು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ.

Read More
Next Story