ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಆಯ್ಕೆ
x
Devendra Fadavi's

ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಆಯ್ಕೆ

ಫಡ್ನವೀಸ್ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ನಿರ್ಗಮಿತ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದರು.

ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಭಾನುವಾರ (ಡಿಸೆಂಬರ್ 1) ಸಂಜೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಡಿಸೆಂಬರ್ 2 ಅಥವಾ 3 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ. ಹೊಸ ಮಹಾಯುತಿ ಸರ್ಕಾರದ ಪ್ರಮಾಣವಚನ ಸಮಾರಂಭವು ಡಿಸೆಂಬರ್ 5 ರಂದು ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಫಡ್ನವೀಸ್ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ನಿರ್ಗಮಿತ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದರು.

Read More
Next Story