ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣವಚನ ಸ್ವೀಕಾರ
x

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣವಚನ ಸ್ವೀಕಾರ

288 ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 132 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಮಹಾಯುತಿ ಒಕ್ಕೂಟವು ಒಟ್ಟು 230 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಳ ಬಹುಮತ ಪಡೆದಿತ್ತು.


ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್‌ ಗುರುವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು.

ಮುಂಬೈನ ಆಜಾದ್‌ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾಗಿ ಮಹಾಯುತಿ ಒಕ್ಕೂಟದ ಏಕನಾಥ್ ಶಿಂಧೆ (ಶಿವಸೇನೆ) ಹಾಗೂ ಅಜಿತ್ ಪವಾರ್ (ಎನ್‌ಸಿಪಿ ) ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎರಡು ವಾರಗಳ ನಂತರ ಅಧಿಕೃತವಾಗಿ ಸರ್ಕಾರ ರಚನೆಯಾಗಿದೆ.

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಹಾಗೂ ಬಿಜೆಪಿ ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಮಹಾಯುತಿ ಒಕ್ಕೂಟದ ನಾಯಕರು ಭಾಗವಹಿಸಿದ್ದರು.


ನಾಗಪುರ ಸೌತ್ ವೆಸ್ಟ್ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿರುವ 54 ವರ್ಷದ ಫಡ್ನವೀಸ್ ಮೂರನೇ ಬಾರಿಗೆ ಮುಖ್ಯಮಂತ್ರಿ ಗದ್ದುಗೆ ಏರಿದ ಸಾಧನೆ ಮಾಡಿದ್ದಾರೆ. ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಪುಟದ ಇತರ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

288 ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 132 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಮಹಾಯುತಿ ಒಕ್ಕೂಟವು ಒಟ್ಟು 230 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಲಕ ಸರಳ ಬಹುಮತ ಪಡೆದಿತ್ತು.

ಮುಖ್ಯಮಂತ್ರಿ ಆಯ್ಕೆ ಸಂಬಂಧ ಮಹಾಯುತಿ ಒಕ್ಕೂಟದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಅತಿ ಹೆಚ್ಚು ಸ್ಥಾನ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್‌ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.

Read More
Next Story