ಕೆಫೆ ಸ್ಫೋಟ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಇಸಿ ಆದೇಶ
x

ಕೆಫೆ ಸ್ಫೋಟ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಇಸಿ ಆದೇಶ


ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣೆ ಆಯೋಗವು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿದೆ.

ಡಿಎಂಕೆ ಈ ಸಂಬಂಧ ದೂರು ನೀಡಿತ್ರಿತು. ಚುನಾವಣೆ ಆಯೋಗ ಈ ಕುರಿತು 48 ಗಂಟೆಗಳ ಒಳಗೆ ಅನುಸರಣೆ ವರದಿಯನ್ನು ಕೇಳಿದೆ.

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಐಇಡಿ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಆರೋಪಿಸಿದ್ದ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಎಂಕೆ ಕೋರಿದೆ.

ಡಿಎಂಕೆ ದೂರು: ಸಚಿವರ ಹೇಳಿಕೆಯು ತಮಿಳುನಾಡಿನ ಜನರನ್ನು ʻಉಗ್ರವಾದಿಗಳುʼ ಎಂದು ಸಾಮಾನ್ಯೀಕರಿಸಿದೆ ಎಂದು ಡಿಎಂಕೆ ಇಸಿಗೆ ದೂರು ನೀಡಿತ್ತು. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶೋಭಾ ಕರಂದ್ಲಾಜೆ, ʻತಮಿಳುನಾಡಿನಿಂದ ಬಂದು ಕರ್ನಾಟಕದಲ್ಲಿ ಬಾಂಬ್ ಇಡುತ್ತಾರೆ. ದಿಲ್ಲಿಯಿಂದ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾರೆ. ಕೇರಳದಿಂದ ಬಂದವರು ಆ್ಯಸಿಡ್ ದಾಳಿ ನಡೆಸುತ್ತಿದ್ದಾರೆʼ ಎಂದು ಹೇಳಿದ್ದರು. ಆನಂತರ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು ಮತ್ತು ಹೇಳಿಕೆ ಹಿಂಪಡೆಯುತ್ತಿರುವುದಾಗಿ ಹೇಳಿದರು.

ವಿವಿಧ ಗುಂಪುಗಳ ನಡುವೆ ʻಹಗೆತನವನ್ನು ಉತ್ತೇಜನʼ ೆಂದು ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರ ಹೇಳಿಕೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಇತರ ಡಿಎಂಕೆ ನಾಯಕರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Read More
Next Story