ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್
x

ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್

ಫೆಮಾ ಉಲ್ಲಂಘನೆ ಆರೋಪ


ಹೊಸದಿಲ್ಲಿ, ಫೆ.19 - ಫೆಮಾ ಉಲ್ಲಂಘನೆ ಪ್ರಕರಣದಲ್ಲಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ ಎಂದು ತಿಳಿದುಬಂದಿದೆ.

ಮಹುವಾ ಅವರಿಗೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡಲಾಗಿದೆ. ಆದರೆ, ತೃಣಮೂಲ ಕಾಂಗ್ರೆಸ್ ನಾಯಕಿ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲು ಇಡಿ ಬಯಸುತ್ತಿದೆ. ಎನ್‌ಆರ್‌ಇ ಖಾತೆಗೆ ಜೋಡಿಸಿದ ಮಾಡಲಾದ ವಹಿವಾಟುಗಳು, ವಿದೇಶಿ ರವಾನೆಗಳು ಮತ್ತು ಹಣದ ವರ್ಗಾವಣೆಯನ್ನು ಇಡಿ ಪರಿಶೀಲನೆಯಲ್ಲಿದೆ.

ಲೋಕಪಾಲ್‌ ಉಲ್ಲೇಖದ ಮೇರೆಗೆ ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಸಿಬಿಐ ಪ್ರಾಥಮಿಕ ತನಿಖೆ ನಡೆಸುತ್ತಿದೆ. ಉದ್ಯಮಿ ದರ್ಶನ್ ಹಿರಾನಂದನಿ ಅವರ ಆದೇಶದ ಮೇರೆಗೆ ಮಹುವಾ ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು. ಈ ಆರೋಪ ನಿರಾಕರಿಸಿರುವ ಮೊಯಿತ್ರಾ, ಅದಾನಿ ಸಮೂಹದ ವ್ಯವಹಾರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರಿಂದ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದರು.

Read More
Next Story