ಚುನಾವಣಾ ಬಾಂಡ್‌ ಪೂರ್ಣ ವಿವರ ಬಹಿರಂಗಪಡಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತರಾಟೆ
x

ಚುನಾವಣಾ ಬಾಂಡ್‌ ಪೂರ್ಣ ವಿವರ ಬಹಿರಂಗಪಡಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತರಾಟೆ

ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು, ಚುನಾವಣಾ ಬಾಂಡ್‌ ಕುರಿತ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವಂತೆ ಎಸ್‌ ಬಿ ಐ ಗೆ ತಾಕೀತು ಮಾಡಿದೆ.


ರಾಜಕೀಯ ಪಕ್ಷಗಳು ಪಡೆದಿರುವ ಚುನಾವಣಾ ಬಾಂಡ್‌ಗಳ ಆಲ್ಫಾ-ನ್ಯೂಮರಿಕ್ ಸಂಖ್ಯೆಗಳನ್ನು‌ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಮಾರ್ಚ್ 15) ಬ್ಯಾಂಕ್‌ಗೆ ನಿರ್ದೇಶಿಸಿದೆ.

ಚುನಾವಣಾ ಬಾಂಡ್‌ಗಳ ಪ್ರಕರಣದಲ್ಲಿ ಮಾರ್ಚ್ 11 ರ ಆದೇಶದ ಬಗ್ಗೆ ಚುನಾವಣಾ ಆಯೋಗ (ಇಸಿ) ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಈ ಬಗ್ಗೆ ಬ್ಯಾಂಕ್‌ನ ಪ್ರತಿಕ್ರಿಯೆಯನ್ನೂ ಕೇಳಿದೆ.

ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರ ಮನವಿಯನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಬ್ಯಾಂಕ್‌ಗೆ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದೆ.

ಎಸ್‌ಬಿಐ ನೀಡಿರುವ ಅಂಕಿಅಂಶಗಳು ಅಪೂರ್ಣ ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ಕಳೆದ 5 ವರ್ಷಗಳಲ್ಲಿ ಮಾಡಿದ ದೇಣಿಗೆಗಳ ಎಲ್ಲಾ ವಿವರಗಳನ್ನು ಹಂಚಿಕೊಳ್ಳಲು ಬ್ಯಾಂಕ್‌ಗೆ ನಿರ್ದೇಶಿಸಿದೆ.

"ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ಯಾರು ಹಾಜರಾಗುತ್ತಿದ್ದಾರೆ? ಅವರು ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಅದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಹಿರಂಗಪಡಿಸಬೇಕು" ಎಂದು ವಿಚಾರಣೆಯ ಆರಂಭದಲ್ಲಿಯೇ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ಮುಂದಿನ ವಿಚಾರಣೆಯನ್ನು ಮಾರ್ಚ್ 18ಕ್ಕೆ ವಿಚಾರಣೆಗೆ ಮುಂದೂಡಿದೆ.

Read More
Next Story