
ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಗುರುವಾರ ತಮ್ಮ ಕೋಲ್ಕತ್ತಾದ ಮನೆಯಲ್ಲಿ ನಿಧನರಾದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ತಿಳಿಸಿದ್ದಾರೆ.
ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ ಮೀರಾ ಮತ್ತು ಮಗಳು ಸುಚೇತನಾ ಅವರನ್ನು ಇದ್ದಾರೆ.
ಅವರು 2000 ರಿಂದ 2011 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.
Next Story