
ಸಿಬಿಐನಿಂದ ಬಂಧನ: ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ ಕೇಜ್ರಿವಾಲ್
ಹೊಸದಿಲ್ಲಿ, ಜು.1 - ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಜೂನ್ 26 ರಂದು ವಿಚಾರಣೆ ನ್ಯಾಯಾಲಯವು ಅವರನ್ನು ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಅವರನ್ನು ಸಿಬಿಐ ಮೂರು ದಿನ ಕಸ್ಟಡಿಗೆ ಪಡೆದುಕೊಂಡಿದೆ. ಕೇಜ್ರಿವಾಲ್ ಅವರು ಈ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿತ್ತು.
Next Story