ಕೇಜ್ರಿವಾಲ್ ಮಧ್ಯಂತರ ಜಾಮೀನು: ಆದೇಶ 5ರಂದು
x

ಕೇಜ್ರಿವಾಲ್ ಮಧ್ಯಂತರ ಜಾಮೀನು: ಆದೇಶ 5ರಂದು


ನವದೆಹಲಿ, ಜೂನ್ 1- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯ ಆದೇಶವನ್ನು ನ್ಯಾಯಾಲಯವು ಜೂನ್ 5 ಕ್ಕೆ ಕಾಯ್ದಿರಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆಯೇ ಹೊರತು, ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ವಿಸ್ತರಣೆಗೆ ಅಲ್ಲ ಎಂದು ಗಮನಿಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.

ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಪರಿಹಾರ ಇಂದು ಕೊನೆಗೊಳ್ಳುತ್ತದೆ. ಅವರು ಭಾನುವಾರದೊಳಗೆ ಶರಣಾಗಬೇಕು.

Read More
Next Story