ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ವಿಸ್ತರಣೆ
x

ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ವಿಸ್ತರಣೆ


ನವದೆಹಲಿ, ಮೇ 21- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ವನ್ನು ದೆಹಲಿ ನ್ಯಾಯಾಲಯ ಮೇ 31 ರವರೆಗೆ ವಿಸ್ತರಿಸಿದೆ.

ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ಮಾರ್ಚ್ 9 ರಂದು ಮದ್ಯ ನೀತಿ ಪ್ರಕರಣದಲ್ಲಿ ಅವರನ್ನು ಬಂಧಿಸಿತ್ತು. ದೆಹಲಿಯ ರಾಷ್ಟ್ರೀ ಯ ರಾಜಧಾನಿ ಪ್ರಾಂತ್ಯ (ಜಿಎನ್‌ಸಿಟಿಡಿ)ದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರನ್ನು ಸಿಬಿಐ ಬಂಧಿಸಿತ್ತು. ಅವರು ಎರಡೂ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

Read More
Next Story