ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆ
x

ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆ


ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್‌ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು.

ಎಕ್ಸ್‌ ನಲ್ಲಿ ʻಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಷಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷ ಹಾಗೂ ರಾಷ್ಟ್ರದ ಸೇವೆ ಸಲ್ಲಿಸುತ್ತೇನೆʼ ಎಂದು ಬರೆದಿದ್ದಾರೆ.‌ ನಾಲ್ಕು ಟೆಸ್ಟ್‌ ಹಾಗೂ ಒಂದು ಏಕ ದಿನ ಪಂದ್ಯದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿರುವ ಗಣೇಶ್‌, ತಮ್ಮ 33 ನೇ ವಯಸ್ಸಿನಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದರು. ಕೆಲಕಾಲ ತರಬೇತಿದಾರರಾಗಿ ಕಾರ್ಯ ನಿರ್ವಹಿಸಿದ್ದರು. ಆನಂತರ ಜನತಾ ದಳ(ಎಸ್) ಸೇರಿದ್ದರು.

ಮಾಜಿ ಮುಖ್ಯಂಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ರಾಘವೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ, ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅಗರ್‌ ವಾಲ್‌, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಉಪಸ್ಥಿತರಿದ್ದರು.

Read More
Next Story