
ಸುದರ್ಶನ್ ರೆಡ್ಡಿ
ಉಪರಾಷ್ಟ್ರಪತಿ ಚುನಾವಣೆ | 'ಇಂಡಿಯಾ' ಒಕ್ಕೂಟದ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಬಿ.ಸುದರ್ಶನ್ ರೆಡ್ಡಿ ಅವರು ಈ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಅವರು ಉಪರಾಷ್ಟ್ರಪತಿ ಚುನಾವಣೆಗೆ 'ಇಂಡಿಯಾ' ಒಕ್ಕೂಟದ ಒಮ್ಮತದ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದರು.
ದೆಹಲಿಯಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ಹಿರಿಯ ನಾಯಕರು ಹಾಜರಿದ್ದರು.
ಎನ್‌ಸಿಪಿ-ಎಸ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಮಾಜವಾದಿ ಪಕ್ಷದ (ಎಸ್.ಪಿ) ಸಂಸದ ರಾಮ್ ಗೋಪಾಲ್ ಯಾದವ್, ಡಿಎಂಕೆ ಸಂಸದ ತಿರುಚಿ ಶಿವ, ಶಿವಸೇನೆ (ಯುಬಿಟಿ)ಯ ಸಂಜಯ್ ರಾವತ್ ಮತ್ತು 'ಇಂಡಿಯಾ' ಒಕ್ಕೂಟದ ಇತರ ಅನೇಕ ಪ್ರಮುಖರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.
ಬಿ. ಸುದರ್ಶನ್ ರೆಡ್ಡಿ ಅವರು ಈ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಇಂದೇ ಕೊನೆಯಾಗಲಿದೆ. ಸೆ.9ರಂದು ಮತದಾನ ನಡೆಯಲಿದೆ.