ಪಟಾಕಿ ಘಟಕದಲ್ಲಿ ಸ್ಫೋಟ: ನಾಲ್ವರು ಕಾರ್ಮಿಕರು ಸಾವು
x
ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಮೃತ ಕಾರ್ಮಿಕರ ಕುಟುಂಬಗಳಿಗೆ 3 ಲಕ್ಷ ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸ್ಟಾಲಿನ್

ಪಟಾಕಿ ಘಟಕದಲ್ಲಿ ಸ್ಫೋಟ: ನಾಲ್ವರು ಕಾರ್ಮಿಕರು ಸಾವು


ವಿರುಧುನಗರ, ಜೂ. 29: ಇಲ್ಲಿಗೆ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಫೋಟ ಮತ್ತು ಬೆಂಕಿಗೆ ಪಟಾಕಿ ತಯಾರಿಕೆಗೆ ಬಳಸುವ ರಾಸಾಯನಿಕ ವಸ್ತುಗಳು ಹಾಗೂ ಕಚ್ಚಾ ಸಾಮಗ್ರಿಗಳನ್ನು ಸರಿಯಾಗಿ ನಿರ್ವಹಿಸದೆ ಇರುವುದು ಕಾರಣ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮೀಪದಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಉತ್ಪಾದನಾ ಪ್ರಕ್ರಿಯೆಗೆ ಮೀಸಲಿಟ್ಟ ಕೊಠಡಿಗಳು ಹಾನಿಗೊಳಗಾಗಿವೆ ಎಂದು ಹೇಳಿದರು.

ವಿರುಧುನಗರ ಜಿಲ್ಲೆಯ ಸತ್ತೂರು ತಾಲೂಕಿನ ಪಂತುವರಪಟ್ಟಿ ಗ್ರಾಮದ ಪಟಾಕಿ ಘಟಕದಲ್ಲಿ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಅಚಂಕುಳಂ ಗ್ರಾಮದ ರಾಜಕುಮಾರ್(45), ನಡುಸುರಂಕುಡಿಯ ಮರಿಸಾಮಿ (40), ವೆಂಬಕೊಟ್ಟೈ ಮೂಲದ ಸೆಲ್ವಕುಮಾರ್ (35) ಮತ್ತು ಮೋಹನ್ (30) ಎಂದು ಗುರುತಿಸಲಾಗಿದೆ.

ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Read More
Next Story