ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿಇಸಿ
x

ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿಇಸಿ


ಹೊಸದಿಲ್ಲಿ, ಮೇ 25- ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆಯನ್ನು ಅತಿ ಶೀಘ್ರವೇ ಆರಂಭಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ.

ʻಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಆದ ಮತದಾನದ ಪ್ರಮಾಣದಿಂದ ಆಯೋಗ ಉತ್ತೇಜಿತವಾಗಿದೆ. ಜಮ್ಮು- ಕಾಶ್ಮೀರದ ಜನರು ತಮ್ಮದೇ ಸರ್ಕಾರಕ್ಕೆ ಅರ್ಹರಾಗಿದ್ದಾರೆ. ಲೋಕಸಭೆ ಸಂಸತ್ತಿನ ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆಯಿಂದ ಆಯೋಗ ಉತ್ತೇಜಿತವಾಗಿದೆ. ಇದು ಸಂಗೀತದಂತೆ ಸವಿಯಾಗಿದೆ. ಯುವಜನರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳು ಮತ್ತಷ್ಟು ಬಲಗೊಳ್ಳುತ್ತಿವೆ. ಚುನಾವಣೆ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸುತ್ತೇವೆ,ʼ ಎಂದು ಹೇಳಿದರು.

ಮಾರ್ಚ್‌ನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದಾಗ, ವ್ಯವಸ್ಥೆ ಮತ್ತು ಭದ್ರತೆಯ ಕಾರಣಗಳಿಂದಾಗಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದು ಪ್ರಾಯೋಗಿಕವಾಗಿಲ್ಲ ಎಂದು ಹೇಳಿದ್ದರು.

ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ನಡೆದ ಮೊದಲನೆ ಚುನಾವಣೆ ಇದಾಗಿರಲಿದೆ. ಕ್ಷೇತ್ರ ವಿಭಜನೆ ಬಳಿಕ ವಿಧಾನಸಭೆ ಸ್ಥಾನಗಳ ಸಂಖ್ಯೆ 83 ರಿಂದ 90 ಕ್ಕೆ ಏರಿದೆ.

ಜಮ್ಮು-ಕಾಶ್ಮೀರದಲ್ಲಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಸುಪ್ರೀಂ ಕೋರ್ಟ್ ಡಿಸೆಂಬರ್‌ನಲ್ಲಿ

ನಿರ್ದೇಶನ ನೀಡಿದೆ.

Read More
Next Story