
ಟ್ರಕ್ ಟ್ರೇಲರ್ ಗೆ ಕಾರು ಡಿಕ್ಕಿ, 7 ಮಂದಿ ಸಾವು
ಸಬರಕಾಂತ (ಗುಜರಾತ್): ಜಿಲ್ಲೆಯ ಹಿಮತ್‌ನಗರ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಟ್ರೇಲರ್ ಟ್ರಕ್‌ಗೆ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶ್ಯಾಮಲಾಜಿಯಿಂದ ಅಹಮದಾಬಾದ್‌ಗೆ ಹೋಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದ ಟ್ರೇಲರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹಿಮತ್‌ನಗರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕಾರಿನಲ್ಲಿದ್ದ ಏಳು ಪ್ರಯಾಣಿಕರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಪಟೇಲ್ ತಿಳಿಸಿದ್ದಾರೆ.
Next Story