Hema panel report| ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಮಹಿಳಾ ಪೀಠ
x

Hema panel report| ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಮಹಿಳಾ ಪೀಠ

ಹೇಮಾ ಸಮಿತಿ ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಪ್ರಶ್ನಿಸಿ ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಸಂದರ್ಭದಲ್ಲಿ ವಿಶೇಷ ಪೀಠದ ಸ್ಥಾಪನೆಯ ಘೋಷಣೆ ಮಾಡಿದೆ.


ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ವ್ಯವಸ್ಥಿತ ಲೈಂಗಿಕ ದೌರ್ಜನ್ಯ‌ ಕುರಿತ ನ್ಯಾ.ಕೆ. ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಕೇರಳ ಹೈಕೋರ್ಟ್‌ನ ಮಹಿಳಾ ವಿಶೇಷ ಪೀಠವು ವಿಚಾರಣೆ ನಡೆಸಲಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ. ಮುಹಮ್ಮದ್ ಮುಸ್ತಾಕ್ ಮತ್ತು ನ್ಯಾ.ಎಸ್. ಮನು ಅವರ ಪೀಠ ಈ ಘೋಷಣೆ ಮಾಡಿದೆ. ಅಂತಹ ಎಲ್ಲ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠವನ್ನು ರಚಿಸಲಾಗುವುದು ಎಂದು ಚಲನಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಪರ ವಕೀಲರಿಗೆ ಪೀಠ ತಿಳಿಸಿದೆ.

ಹೇಮಾ ಸಮಿತಿ ವರದಿಯನ್ನು ಸಾರ್ವಜನಿಕಗೊಳಿಸಬೇಕೆಂಬ ರಾಜ್ಯ ಮಾಹಿತಿ ಆಯೋಗದ ನಿರ್ದೇಶನವನ್ನು ಹೈಕೋರ್ಟ್‌ ಏಕ ಸದಸ್ಯ ಪೀಠ ಎತ್ತಿ ಹಿಡಿದಿದ್ದು, ಈ ಆದೇಶವನ್ನು ಪ್ರಶ್ನಿಸಿ ಪರಾಯಿಲ್ ಮೇಲ್ಮನವಿ ಸಲ್ಲಿಸಿದ್ದರು.

ಹೇಮಾ ಸಮಿತಿ ವರದಿ ಆಧಾರದ ಮೇಲೆ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ಅಪರಾಧ ಎಸಗಿದ ಅಪರಾಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯಾಗಿತ್ತು.

ನಂತರ ಮೊಹರು ಮಾಡಿದ ಲಕೋಟೆಯಲ್ಲಿ ತಿದ್ದುಪಡಿ ಮಾಡಲಾದ ವಿಭಾಗಗಳನ್ನು ಒಳಗೊಂಡಂತೆ ಸಂಪೂರ್ಣ ವರದಿ ನೀಡಬೇಕೆಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

Read More
Next Story