ಹೇಮಂತ್ ಸೊರೆನ್ ಮತ್ತೆ ಜಾರ್ಖಂಡ್ ಸಿಎಂ?
ಹೇಮಂತ್ ಮತ್ತೆ ಪ್ರಮಾಣವಚನ ಸ್ವೀಕರಿಸಿದರೆ, ನವೆಂಬರ್ 15, 2000 ರಂದು ಬಿಹಾರದಿಂದ ಬೇರ್ಪಟ್ಟ ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿ ಆಗಲಿದ್ದಾರೆ.
ರಾಂಚಿ, ಜು 3- ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿಗೆ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಚಂಪೈ ಸೊರೆನ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮೈತ್ರಿಕೂಟದ ನಾಯಕರು ಮತ್ತು ಶಾಸಕರು ಹೇಮಂತ್ ಸೊರೆನ್ ಅವರನ್ನು ಜೆಎಂಎಂ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.
ʻಚಂಪೈ ಸೊರೆನ್ ಅವರ ಬದಲು ಹೇಮಂತ್ ಸೊರೆನ್ ಅವರನ್ನು ನೇಮಿಸಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ,ʼ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹೇಮಂತ್ ಪ್ರಮಾಣವಚನ ಸ್ವೀಕರಿಸಿದರೆ, ನವೆಂಬರ್ 15, 2000 ರಂದು ಬಿಹಾರದಿಂದ ಬೇರ್ಪಟ್ಟ ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿ ಆಗಲಿದ್ದಾರೆ.
ಕಾಂಗ್ರೆಸ್‌ನ ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ರಾಜ್ಯಾಧ್ಯಕ್ಷ ರಾಜೇಶ್ ಠಾಕೂರ್, ಹೇಮಂತ್ ಸೋರೆನ್ ಅವರ ಸಹೋದರ ಬಸಂತ್ ಮತ್ತು ಪತ್ನಿ ಕಲ್ಪನಾ ಸಭೆಯಲ್ಲಿ ಭಾಗವಹಿಸಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದರಿಂದ, ಐದು ತಿಂಗಳ ನಂತರ ಹೇಮಂತ್ ಸೊರೇನ್ ಜೂನ್ 28 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜನವರಿ 31ರಂದು ಬಂಧನಕ್ಕೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.