
ರಾಂಚಿಯ ರಾಜಭವನದಲ್ಲಿ ಹೇಮಂತ್ ಸೊರೆನ್ ಅವರಿಗೆ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು
ಜಾರ್ಖಂಡ್: ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ
ರಾಂಚಿ, ಜುಲೈ 4- ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿಯಾಗಿ ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್, ಸೊರೆನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋರೆನ್ ಅವರ ತಂದೆ ಮತ್ತು ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್, ಅವರ ತಾಯಿ ರೂಪಿ ಸೊರೆನ್, ಪತ್ನಿ ಕಲ್ಪನಾ ಸೊರೆನ್, ಜೆಎಂಎಂ ನೇತೃತ್ವದ ಮೈತ್ರಿಕೂಟದ ಹಿರಿಯ ನಾಯಕರು, ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ ಚಂಪಿ ಸೊರೆನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ, ಜೂನ್ 28 ರಂದು ಹೇಮಂತ್ ಸೊರೆನ್ ಜೈಲಿನಿಂದ ಬಿಡುಗಡೆಯಾಗಿದ್ದರು. ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸುವ ಮುನ್ನವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Next Story