ಅರುಣಾಚಲ ಪ್ರದೇಶದ ಹೆಸರು ಬದಲಾಯಿಸುವ ಚೀನಾ ಯತ್ನಕ್ಕೆ ಭಾರತದ ತೀವ್ರ ವಿರೋಧ
x

ಅರುಣಾಚಲಪ್ರದೇಶ ಭೂಪಟ

ಅರುಣಾಚಲ ಪ್ರದೇಶದ ಹೆಸರು ಬದಲಾಯಿಸುವ ಚೀನಾ ಯತ್ನಕ್ಕೆ ಭಾರತದ ತೀವ್ರ ವಿರೋಧ

"ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ. ಚೀನಾದ ಈ ನಿಷ್ಪ್ರಯೋಜಕ, ಅಸಂಬದ್ಧ ಮತ್ತು ಅವಿವೇಕದ ಪ್ರಯತ್ನಗಳು ಎಂದಿಗೂ ಯಶಸ್ವಿಯಾಗುವುದಿಲ್ಲ." ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸ್ಪಷ್ಟವಾಗಿ ತಿಳಿಸಿದ್ದಾರೆ.


ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಮರುನಾಮಕರಣ ಮಾಡಲು ಚೀನಾ ನಡೆಸುತ್ತಿರುವ ಪ್ರಯತ್ನಗಳನ್ನು ಭಾರತವು ತೀವ್ರವಾಗಿ ಖಂಡಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಬುಧವಾರ ತಿಳಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಣಧೀರ್ ಜೈಸ್ವಾಲ್, ಅರುಣಾಚಲ ಪ್ರದೇಶದಲ್ಲಿ ಕೆಲವು ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಲು ಯತ್ನಿಸುತ್ತಿರುವ ಬಗ್ಗೆ ಭಾರತಕ್ಕೆ ತಿಳಿದಿದೆ. "ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ. ಚೀನಾದ ಈ ನಿಷ್ಪ್ರಯೋಜಕ, ಅಸಂಬದ್ಧ ಮತ್ತು ಅವಿವೇಕದ ಪ್ರಯತ್ನಗಳು ಎಂದಿಗೂ ಯಶಸ್ವಿಯಾಗುವುದಿಲ್ಲ." ಎಂದು ಸ್ಪಷ್ಟವಾಗಿ ಹೇಳಿದರು.

"ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಇರುತ್ತದೆ. ಈ ವಾಸ್ತವವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ." ಚೀನಾದ ಈ ವ್ಯರ್ಥ ಪ್ರಯತ್ನಗಳನ್ನು ಭಾರತವು ಸಂಪೂರ್ಣವಾಗಿ ತಿರಸ್ಕರಿಸುತ್ತದೆ ಎಂದರು.

ಈಶಾನ್ಯ ಭಾರತದ ರಾಜ್ಯವಾದ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗವೆಂದು ಚೀನಾ ಪ್ರತಿಪಾದಿಸುತ್ತಿದೆ. ಈ ಕಾರಣದಿಂದಾಗಿಯೇ ಅದು ಪದೇ ಪದೇ ಅಲ್ಲಿನ ಕೆಲವು ಸ್ಥಳಗಳ ಹೆಸರುಗಳನ್ನು ಬದಲಾಯಿಸಿ ತನ್ನ ನಕ್ಷೆಗಳಲ್ಲಿ ತೋರಿಸಲು ಪ್ರಯತ್ನಿಸುತ್ತಿದೆ. ಕಳೆದ ವರ್ಷವೂ ಚೀನಾ ಇದೇ ರೀತಿಯ ಪ್ರಯತ್ನವನ್ನು ಮಾಡಿತ್ತು. ಭಾರತವು ಆಗಲೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

Read More
Next Story