Bengaluru US consulate : ಬೆಂಗಳೂರಿನ ಯುಎಸ್ ದೂತಾವಾಸ ಕಚೇರಿ ಉದ್ಘಾಟಿಸಿ ಜೈಶಂಕರ್
Bengaluru US consulate: ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು ಎಂಬುದನ್ನುಅಂದಾಜಿಸಬಹುದು ಸಚಿವ ಜೈಶಂಕರ್ ಹೇಳಿದರು.
ಕರ್ನಾಟಕ ಜನತೆಯ ಹಲವು ದಿನಗಳ ಕನಸು ನನಸಾಗಿದ್ದು, ಬೆಂಗಳೂರಲ್ಲಿ (Bengaluru news) ಅಮೆರಿಕಾ ದೂತಾವಾಸ ಕಚೇರಿ (Bengaluru US consulate) ಉದ್ಘಾಟನೆಯಾಗಿದೆ. ಇದು ಅಮೆರಿಕ ಹಾಗೂ ಬೆಂಗಳೂರಿನ ಸಂಬಂಧ ವೃದ್ಧಿಗೆ ಸೇತುವಾಗಲಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಅಭಿಪ್ರಾಯಪಟ್ಟರು.
ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೆಟ್ ಹೋಟೆಲ್‌ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ.ಸಿ.ಎನ್ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಕೂಡ ಪಾಲ್ಗೊಂಡಿದ್ದರು.
ಬೆಂಗಳೂರಿನಲ್ಲಿ ಪ್ರಮುಖ 12 ದೇಶಗಳ ದೂತಾವಾಸ ಕಚೇರಿಗಳಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಬೆಂಗಳೂರಿಗೆ ಸಾಕಷ್ಟು ಸಾಮರ್ಥ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು ಎಂಬುದನ್ನುಅಂದಾಜಿಸಬಹುದು ಸಚಿವ ಜೈಶಂಕರ್ ಹೇಳಿದರು.
2023ರಲ್ಲಿ ಮೋದಿಯವರು ಬೆಂಗಳೂರು ಕಾನ್ಸುಲೇಟ್ ಆರಂಭದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಅಮೆರಿಕಾ ದೂತವಾಸ ಕಚೇರಿ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ ಎದುರಾಗುತ್ತಿತ್ತು. ನನಗೂ ಕರ್ನಾಟಕಕ್ಕೂ ಸಂಬಂಧ ಇದೆ. ನಾನು ಬೆಂಗಳೂರಿನಲ್ಲಿ ಶಿಕ್ಷಣ ಪಡೆದಿದ್ದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ನನ್ನ ವೃತ್ತಿ ಬದುಕು ಆರಂಭಿಸಿದ್ದೇನೆ ಎಂದು ಹೇಳಿದರು.
ಹೊರ ದೇಶದಲ್ಲಿ 35 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 50 ಲಕ್ಷ ಭಾರತೀಯ ಕುಟುಂಬಗಳಿವೆ. ಬೆಂಗಳೂನಿಂದ ಸ್ಯಾನ್ ಫ್ರಾನ್ಸ್‌ಸಿಸ್ಕೋಗೆ ವಾರದಲ್ಲಿ ಮೂರು ದಿನ ವಿಮಾನ ಸಂಚರಿಸುತ್ತಿದೆ. ಕಾನ್ಸುಲೇಟ್‌ನಿಂದ ಅಧ್ಯಯನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾ-ಬೆಂಗಳೂರಿನ ಸಂಬಂಧ ವೃದ್ಧಿಸಲು ಅನುಕೂಲವಾಗಲಿದೆ ಎಂದು ಹೇಳಿದರು. .
ಉದ್ಯಮಿಗಳಿಗೆ ಅನುಕೂಲ: ಡಿಕೆ ಶಿವಕುಮಾರ್
ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್ಎಂ ಕೃಷ್ಣ ಅವರು ಸಿಎಂ ಆಗಿದ್ದಾಗಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ ಎಂದು ಹೇಳಿದರು.