ಜಲ್ನಾದಲ್ಲಿ ಬಾಯ್ಲರ್ ಸ್ಫೋಟ: 22 ಕಾರ್ಮಿಕರಿಗೆ ಗಾಯ, ಮೂವರು ಗಂಭೀರ
ಜಲ್ನಾ: ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿ ಶನಿವಾರ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು, 22 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.
ಗಜ್ ಕೇಸರಿ ಸ್ಟೀಲ್ ಮಿಲ್‌ನಲ್ಲಿ ಮಧ್ಯಾಹ್ನ ಸಂಭವಿಸಿದ ಸ್ಫೋಟದಿಂದ ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದೆ ಎಂದು ಹೇಳಿದರು. ಗಂಭೀರವಾಗಿ ಗಾಯಗೊಂಡವರನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಖಾನೆಯು ಕಬ್ಬಿಣ ತ್ಯಾಜ್ಯದಿಂದ ಉಕ್ಕಿನ ಕಂಬಿಗಳನ್ನು ತಯಾರಿಸುತ್ತದೆ. ಪೊಲೀಸರು ಗಾಯಗೊಂಡ ಕಾರ್ಮಿಕರ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದರು.
Next Story