ಜಾರ್ಖಂಡ್: ರಾಮದಾಸ್ ಸೊರೆನ್ ಸಚಿವರಾಗಿ ಪ್ರಮಾಣವಚನ ಸ್ವೀಕಾರ
x

ಜಾರ್ಖಂಡ್: ರಾಮದಾಸ್ ಸೊರೆನ್ ಸಚಿವರಾಗಿ ಪ್ರಮಾಣವಚನ ಸ್ವೀಕಾರ


ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರದಲ್ಲಿ ಜೆಎಂಎಂ ಶಾಸಕ ರಾಮದಾಸ್ ಸೊರೆನ್ ಶುಕ್ರವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ರಾಮದಾಸ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಘಟಶಿಲಾ ಕ್ಷೇತ್ರದ ಶಾಸಕರಾದ ರಾಮದಾಸ್‌, ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರ ಬದಲು ನೇಮಕಗೊಂಡಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್, ಜೆಎಂಎಂ ನೇತೃತ್ವದ ಮೈತ್ರಿಕೂಟದ ಹಿರಿಯ ನಾಯಕರು ಮತ್ತು ಹಲವು ಸರ್ಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಚಂಪೈ ಸೊರೆನ್ ಅವರು ಬಿಜೆಪಿ ಸೇರಲಿದ್ದಾರೆ. ಕಳೆದ ತಿಂಗಳು ಹೇಮಂತ್ ಸೊರೆನ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೆನ್, ಬುಧವಾರ ಜೆಎಂಎಂ ತೊರೆದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗುವ ಮೊದಲು ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಚಂಪೈ ಸೊರೆನ್ ಫೆಬ್ರವರಿ 2 ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ನೇಮಕಗೊಂಡರು ಮತ್ತು ಜುಲೈ 3 ರಂದು ಹುದ್ದೆ ತೊರೆದರು. ಜಾಮೀನಿನ ಮೇಲೆ ಬಿಡುಗಡೆಯಾದ ಹೇಮಂತ್ , ಜುಲೈ 4 ರಂದು ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

Read More
Next Story