SSC massive recruitment for 25,487 constable posts; Only a few hours left to apply
x
SSC ಹುದ್ದೆಗೆ ನೇಮಕ ಪ್ರಕ್ರಿಯೆ

SSC ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸಲು ಕೆಲವೇ ಗಂಟೆಗಳು ಬಾಕಿ

ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಎಸ್‌ಎಸ್‌ಸಿ ಅವಕಾಶ ನೀಡಿದೆ. ಇದರಿಂದ ಅತೀ ಹೆಚ್ಚು ಕನ್ನಡಿಗರು ಸೇನೆಗೆ ಸೇರಲು ಅವಕಾಶ ಸಿಕ್ಕಂತಾಗಿದೆ.


Click the Play button to hear this message in audio format

ದೇಶದ ಸಶಸ್ತ್ರ ಮೀಸಲು ಪಡೆ ಹಾಗೂ ಅರಸೇನಾಪಡೆಗಳಲ್ಲಿ ಸೇವೆ ಸಲ್ಲಿಸಲು ಕನಸು ಕಂಡಿರುವ ಯುವಜನತೆಗೆ ಸಿಬ್ಬಂದಿ ಆಯ್ಕೆ ಆಯೋಗ(ಎಸ್‌ಎಸ್‌ಸಿ) ಸಿಹಿಸುದ್ದಿ ನೀಡಿದ್ದು, ಡಿ.1ರಂದು ಅಧಿಸೂಚನೆ ಹೊರಡಿಸಿ ಆದೇಶಿಸಿತ್ತು. ಅರ್ಜಿ ಸಲ್ಲಿಸಲು ಬುಧವಾರ (ಡಿ.31) ಅಂದರೆ ಇಂದೇ ಕೊನೆಯ ದಿನಾಂಕವಾಗಿದ್ದು ರಾತ್ರಿ 11ಗಂಟೆವರೆಗೂ ಅರ್ಜಿ ಸಲ್ಲಿಸಬಹುದಾಗಿದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs), ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಕಾನ್​ಸ್ಟೆಬಲ್​ (GD) ಸೇರಿದಂತೆ ವಿವಿಧ ಭದ್ರತಾ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಡಿ.1ರಂದು ಅರ್ಜಿ ಆಹ್ವಾನಿಸಿತ್ತು. ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಒಟ್ಟು 25,487 ಹುದ್ದೆಗಳು ಖಾಲಿ ಉಳಿದಿದ್ದು, ಬೃಹತ್‌ ನೇಮಕಾತಿಗೆ ಆದೇಶ ನೀಡಿತ್ತು.

ಬಿಎಸ್‌ಎಫ್‌, ಸಿಐಸಿಎಫ್‌, ಸಿಆರ್‌ಪಿಎಫ್‌, ಎಸ್‌ಎಸ್‌ಬಿ, ಐಟಿಬಿಪಿ, ಅಸ್ಸಾಂ ರೈಫಲ್ಸ್ ಮತ್ತು ಎಸ್‌ಎಸ್‌ಎಫ್‌ ಪಡೆಗಳಲ್ಲಿ ಖಾಲಿ ಇರುವ ಒಟ್ಟು 25,487 ಹುದ್ದೆಗಳ ಪೈಕಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 14,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಹೊಂದಿರುವ ಅತಿ ದೊಡ್ಡ ಭದ್ರತಾ ಪಡೆಯಾಗಿದೆ.

ಯಾವ್ಯಾವ ಪಡೆಗಳಲ್ಲಿ ಎಷ್ಟು ಹುದ್ದೆಗಳಿವೆ ?

  • ಕೇಂದ್ರ ಕೈಗಾರಿಕಾ ಭದ್ರತಾ ಪಡೆ: 14,595
  • ಗಡಿ ಭದ್ರತಾ ಪಡೆ: 616
  • ಕೇಂದ್ರ ಸಶಸ್ತ್ರ ಮೀಸಲು ಪಡೆ: 5,490
  • ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್: 23
  • ಇಂಡೋ-ಟಿಬೇಟ್‌ ಗಡಿ ಭದ್ರತಾ ಪಡೆ: 1,293
  • ಅಸ್ಸಾಂ ರೈಫಲ್ಸ್‌: 1,706
  • ಸರ್ವಿಸ್‌ ಸೆಲೆಕ್ಷನ್‌ ಬೋರ್ಡ್‌: 1,764

ಒಟ್ಟು ಹುದ್ದೆಗಳಲ್ಲಿ ಪುರುಷ ಅಭ್ಯರ್ಥಿಗಳಿಗೆ 23,467 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 2,020 ಹುದ್ದೆಗಳನ್ನು ನಿಗದಿಪಡಿಸಲಾಗಿದೆ.

ಕನ್ನಡದಲ್ಲೂ ಪರೀಕ್ಷೆ ಬರೆಯಿರಿ

ಎಸ್‌ಎಸ್‌ಸಿ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಎಸ್‌ಎಸ್‌ಸಿ ಅವಕಾಶ ನೀಡಿದೆ. ಇದರಿಂದ ಅತೀ ಹೆಚ್ಚು ಕನ್ನಡಿಗರು ಸೇನೆಗೆ ಸೇರಲು ಅವಕಾಶ ನೀಡಿದಂತಾಗಿದೆ.

ಅರ್ಹತೆ ಮತ್ತು ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 2025 ಆಗಸ್ಟ್‌ 1ಕ್ಕೆ ಕನಿಷ್ಠ 18 ವರ್ಷ ವಯಸ್ಸು, ಗರಿಷ್ಠ 23 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇದೆ.

ವೇತನ

ಗಡಿ ಭದ್ರತಾ ಪಡೆಯ ಕಾನ್ಸ್‌ಟೇಬಲ್ ಹಂತ-3 ನೇ ಹುದ್ದೆಯಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ 21,700 - 69,100 ರೂ. ಹಾಗೂ ಮೂಲ ವೇತನದ ಜೊತೆಗೆ, ನೀವು ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ತುಟ್ಟಿ ಭತ್ಯೆ (DA), ನಿವೇಶನ ಭತ್ಯೆ, ಪಡಿತರ ಹಣ ಭತ್ಯೆ, ಉಡುಗೆ ಭತ್ಯೆ ಮತ್ತು ಇತರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಪರೀಕ್ಷಾ ಮಾದರಿ

ಪರೀಕ್ಷೆಯು ಒಂದು ಗಂಟೆಯ ಅವಧಿಯದ್ದಾಗಿದ್ದು, 80 ಪ್ರಶ್ನೆಗಳಿರುವ ಪತ್ರಿಕೆಯಲ್ಲಿ ಪ್ರತೀ ಪ್ರಶ್ನೆಗೆ ತಲಾ ಎರಡು ಅಂಕಗಳನ್ನು ನಿಗದಿಪಡಿಸಲಾಗಿದೆ. ಪತ್ರಿಕೆಯು ಕನ್ನಡ, ಇಂಗ್ಲೀಷ್‌, ಹಿಂದಿ ಹಾಗೂ 12 ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದಾಗಿದ್ದು, ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಡಿತಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪರೀಕ್ಷೆ ಶುಲ್ಕ

ಸಾಮಾನ್ಯ , ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ 100 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಸಂದಾಯ ಮಾಡಬೇಕಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು ಹಾಗೂ ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ಕಟ್ಟಲು ಜ.1 ರಾತ್ರಿ 11ಗಂಟೆವರೆಗೂ ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ತಿದ್ದುಪಡಿ ಹಾಗೂ ಪರೀಕ್ಷಾ ದಿನಾಂಕ

ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ತಪ್ಪಾಗಿ ಮಾಹಿತಿ ನಮೂದಿಸಿದ್ದರೆ ತಿದ್ದುಪಡಿ ಮಾಡಿಕೊಳ್ಳಲು ಜ.8ರಿಂದ 10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಫೆಬ್ರವರಿ ಅಥವಾ ಏಪ್ರಿಲ್‌ನಲ್ಲಿ ಪರೀಕ್ಷೆನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story