SM Krishna: ಮಾಜಿ ಸಿಎಂ , ಮಾಜಿ ವಿದೇಶಾಂಗ ಸಚಿವ ಎಸ್‌ ಎಂ ಕೃಷ್ಣ ಇನ್ನಿಲ್ಲ
x
ಎಸ್​ ಎಂ ಕೃಷ್ಣ

SM Krishna: ಮಾಜಿ ಸಿಎಂ , ಮಾಜಿ ವಿದೇಶಾಂಗ ಸಚಿವ ಎಸ್‌ ಎಂ ಕೃಷ್ಣ ಇನ್ನಿಲ್ಲ

SM Krishna: ಕರ್ನಾಟಕದ ಅತ್ಯಂತ ಹೆಚ್ಚು ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಎಸ್​ಎಂ ಕೃಷ್ಣ ಅವರು ಒಬ್ಬರು. ರಾಜಕೀಯ ಜೀವನದ ಬಹುಕಾಲ ಕಾಂಗ್ರೆಸ್​ನಲ್ಲಿದ್ದ ಅವರು ಕೊನೇ ಹಂತದಲ್ಲಿ ಬಿಜೆಪಿ ಸೇರಿದ್ದರು. 2012ರಲ್ಲಿ ಬಿಜೆಪಿ ಸದಸ್ಯತ್ವ ಪಡೆದಿದ್ದರು.


ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (SM Krishna) ಅವರು ಡಿಸೆಂಬರ್​ 10ರಂದು (ಮಂಗಳವಾರ) ಮಧ್ಯರಾತ್ರಿ 2:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಎಸ್​ಎಂ ಕೃಷ್ಣ ದೇಶ ಕಂಡ ಅತ್ಯಂತ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದರು. ಕೇಂದ್ರದಲ್ಲಿ ವಿದೇಶಾಂಗ ಸಚಿವರಾಗಿ ಕೆಲಸ ಮಾಡಿದ್ದ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಎಸ್.ಎಂ.ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು.

ಕರ್ನಾಟಕದ ಅತ್ಯಂತ ಹೆಚ್ಚು ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಎಸ್​ಎಂ ಕೃಷ್ಣ ಅವರು ಒಬ್ಬರು. ರಾಜಕೀಯ ಜೀವನದ ಬಹುಕಾಲ ಕಾಂಗ್ರೆಸ್​ನಲ್ಲಿದ್ದ ಅವರು ಕೊನೇ ಹಂತದಲ್ಲಿ ಬಿಜೆಪಿ ಸೇರಿದ್ದರು. 2012ರಲ್ಲಿ ಬಿಜೆಪಿ ಸದಸ್ಯತ್ವ ಪಡೆದಿದ್ದರು.

ಎಸ್‌.ಎಂ.ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಯಶಸ್ವಿನಿ ಯೋಜನೆ, ಬೆಂಗಳೂರು- ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದು, ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಸೇರಿದಂತೆ ಇನ್ನೂ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ

ಎಸ್​ಎಂ ಕೃಷ್ಣ 1999ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 2004ರಿಂದ 2008ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989 ರಿಂದ ಜನವರಿ 1992 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2004 ರವರೆಗೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಕೃಷ್ಣ ಅವರಿಗೆ2023ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ಗೌರವವೂ ಲಭಿಸಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಆರಂಭದಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

Read More
Next Story