ಕೇಜ್ರಿವಾಲ್‌ರಿಂದ ಕೊಳಗೇರಿಗಳ ಬಗ್ಗೆ ಸುಳ್ಳು ಹೇಳಿಕೆ: ವಿ.ಕೆ ಸಕ್ಸೇನಾ ಕಿಡಿ
VK Saxena : ಡೆಲ್ಲಿಯಲ್ಲಿ ವಿಧಾನಸಭಾ ಚುನಾವಣೆ ಕಳೆಗಟ್ಟಿರುವ ಹಿನ್ನೆಲೆಯಲ್ಲಿ ಆರೋಪ- ಪ್ರತ್ಯಾರೋಪಗಳು ನಡೆಯತ್ತಿರುವ ನಡುವೆ ಆಪ್ ಹೇಳಿಕೆ ಬಿಜೆಪಿ ಹೆಚ್ಚು ಆಘಾತಕ್ಕೆ ಒಳಗಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಕೊಳೆಗೇರಿಗಳನ್ನು ನೆಲಸಮ ಮಾಡುತ್ತದೆ ಎಂದು ಡೆಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿರುವ ಹೇಳಿಕೆ ಸುಳ್ಳು ಎಂಬುದಾಗಿ ದೆಹಲಿ ಲಿಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಹೇಳಿದ್ದಾರೆ. ಈ ವಿಚಾರವಾಗಿ ಆಪ್ ಮೇಲೆ ವಾಗ್ದಾಳಿ ನಡೆಸಿರುವ ಅವರು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯ ಎಲ್ಲಾ ಕೊಳಗೇರಿ ಪ್ರದೇಶಗಳನ್ನು ನೆಲಸಮ ಮಾಡುತ್ತದೆ ಎಂದಿದ್ದರು. ʼʼಮೊದಲು ನಿಮ್ಮ ಮತಗಳು ಬಿಜೆಪಿಗೆ ಬೇಕಾಗುತ್ತದೆ. ಬಳಿಕ ಕೊಳಗೇರಿ ಪ್ರದೇಶಗಳನ್ನು ನೆಲಸಮ ಮಾಡುತ್ತಾರೆ. ಕೊಳಗೇರಿ ನಿವಾಸಿಗಳನ್ನು ಬಿಜೆಪಿ ಕಡೆಗಣಿಸಿದೆ ಎಂದು ಭಾನುವಾರ ಆರೋಪಿಸಿದ್ದರು.
ಡೆಲ್ಲಿಯಲ್ಲಿ ವಿಧಾನಸಭಾ ಚುನಾವಣೆ ಕಳೆಗಟ್ಟಿರುವ ಹಿನ್ನೆಲೆಯಲ್ಲಿ ಆರೋಪ- ಪ್ರತ್ಯಾರೋಪಗಳು ನಡೆಯತ್ತಿರುವ ನಡುವೆ ಆಪ್ ಹೇಳಿಕೆ ಬಿಜೆಪಿ ಹೆಚ್ಚು ಆಘಾತಕ್ಕೆ ಒಳಗಾಗಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ವಿ.ಕೆ ಸಕ್ಸೇನಾ, ಆಪ್ ನಾಯಕ ಅರವಿಂದ ಕೇಜ್ರಿವಾಲ್ ಅವರು ಸುಳ್ಳು ಮತ್ತು ಉದ್ದೇಶಪೂರ್ವಕವಾಗಿಯೇ ಜನರನ್ನು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
'ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡದಂತೆ ಕೇಜ್ರಿವಾಲ್ ಅವರಿಗೆ ತಿಳಿಸಿರುವ ಸಕ್ಸೇನಾ, ಮತ್ತೆ ಕೊಳಗೇರಿಗಳ ವಿಷಯದಲ್ಲಿ ಸುಳ್ಳು ಹೇಳಿದರೆ ಡಿಡಿಎ (ದೆಹಲಿ ಅಭಿವೃದ್ಧಿ ಪ್ರಾಧಿಕಾರ) ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಿದೆ' ಎಂದು ಡಿಡಿಎ ಮುಖ್ಯಸ್ಥರೂ ಆಗಿರುವ ಸಕ್ಸೇನಾ ತಿಳಿಸಿದ್ದಾರೆ.
70 ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಹೊರಬೀಳಲಿದೆ.