ಇನ್ನೆರಡು ದಿನಗಳಲ್ಲಿ ಸಿ.ಎಂ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್
ಇನ್ನೆರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ (ಸೆ.15) ಘೋಷಿಸಿದ್ದಾರೆ.
ಇನ್ನೆರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ (ಸೆ.15) ಘೋಷಿಸಿದ್ದಾರೆ.
ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ಎರಡು ದಿನಗಳ ನಂತರ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರು ತೀರ್ಪು ಪ್ರಕಟಿಸುವವರೆಗೂ ನಾನು ಆ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ದೆಹಲಿಯಲ್ಲಿ ಚುನಾವಣೆಗೆ ತಿಂಗಳುಗಳು ಬಾಕಿ ಇವೆ. ನನಗೆ ಕಾನೂನು ನ್ಯಾಯಾಲಯದಿಂದ ನ್ಯಾಯ ಸಿಕ್ಕಿತು. ಈಗ ನನಗೆ ಜನತಾ ನ್ಯಾಯಾಲಯದಿಂದ ನ್ಯಾಯ ಸಿಗುತ್ತದೆ. ಜನರ ಆದೇಶದ ನಂತರವೇ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ" ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅವಧಿಗೂ ಮುನ್ನ ಚುನಾವಣೆ ನಡೆಸುವಂತೆ ಸಿಎಂ ಆಗ್ರಹ
ಫೆಬ್ರವರಿಯಲ್ಲಿ ದೆಹಲಿ ಚುನಾವಣೆಗಳು ನಡೆಯಲಿವೆ. ಆದರೆ ನಾನು ರಾಷ್ಟ್ರ ರಾಜಧಾನಿಯಲ್ಲಿ ಮಹಾರಾಷ್ಟ್ರದೊಂದಿಗೆ ನವೆಂಬರ್‌ನಲ್ಲಿ ಚುನಾವಣೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಕೇಜ್ರಿವಾಲ್ ಸಾರ್ವಜನಿಕ ಸಭೆಯಲ್ಲಿ ಹೇಳಿದರು. ಇದಲ್ಲದೆ ಕೇಜ್ರಿವಾಲ್ ನಿರಪರಾಧಿ ಅಥವಾ ಅಪರಾಧಿಯೇ? ನಾನು ಕೆಲಸ ಮಾಡಿದ್ದರೆ ನನಗೆ ಮತ ನೀಡಿ ಎಂದು ಅವರು ದೆಹಲಿಯ ಜನರನ್ನು ಕೇಳಿಕೊಂಡರು.
“ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡಿದ ನಂತರವೇ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ, ಜೈಲಿನಿಂದ ಹೊರಬಂದ ನಂತರ ‘ಅಗ್ನಿಪರೀಕ್ಷೆ’ ನೀಡಲು ಬಯಸುತ್ತೇನೆ. ನಾವು ಪ್ರಾಮಾಣಿಕರು ಎಂದು ಜನರು ಹೇಳಿದಾಗ ಮಾತ್ರ ನಾನು ಮುಖ್ಯಮಂತ್ರಿಯಾಗುತ್ತೇನೆ, ಸಿಸೋಡಿಯಾ ಉಪಮುಖ್ಯಮಂತ್ರಿಯಾಗುತ್ತಾರೆ" ಎಂದು ಅವರು ಹೇಳಿದರು.
ಸಹ ಮುಖ್ಯಮಂತ್ರಿಗಳಿಗೆ ಮನವಿ
ಕೇಜ್ರಿವಾಲ್ ಅವರು ನರೇಂದ್ರ ಮೋದಿ ಸರ್ಕಾರ ಬ್ರಿಟಿಷರಿಗಿಂತ ಹೆಚ್ಚು ಸರ್ವಾಧಿಕಾರಿ. ಬಂಧಿತರಾಗಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿರಲು ಪ್ರಜಾಪ್ರಭುತ್ವವನ್ನು ಉಳಿಸಲು ಬಯಸಿದ್ದೇ ಕಾರಣ ಎಂದ ಅವರು, "ಅವರು (ಕರ್ನಾಟಕ ಮುಖ್ಯಮಂತ್ರಿ) ಸಿದ್ದರಾಮಯ್ಯ, (ಕೇರಳ ಮುಖ್ಯಮಂತ್ರಿ) ಪಿಣರಾಯಿ ವಿಜಯನ್, (ಬಂಗಾಳ ಮುಖ್ಯಮಂತ್ರಿ) ಮಮತಾ ದೀದಿ (ಬ್ಯಾನರ್ಜಿ) ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ನಾನು ಬಿಜೆಪಿಯೇತರರಿಗೆ ಮನವಿ ಮಾಡಲು ಬಯಸುತ್ತೇನೆ, ಅವರು ನಿಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರೆ ರಾಜೀನಾಮೆ ನೀಡಬೇಡಿ. ಇದು ಅವರ ಹೊಸ ಆಟ ಎಂದು ಮೋದಿ ಸರ್ಕಾರವನ್ನು ಟೀಕಿಸಿದರು.
ಪಿಆರ್ ಸ್ಟಂಟ್: ಬಿಜೆಪಿ
ಈ ಮಧ್ಯೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಜ್ರಿವಾಲ್ ಅವರ ರಾಜೀನಾಮೆ ಘೋಷಣೆಯನ್ನು 'ಪಿಆರ್ ಸ್ಟಂಟ್' ಎಂದು ಕರೆದಿದೆ. ದೆಹಲಿ ಜನರಲ್ಲಿ ತಮ್ಮ ಇಮೇಜ್ ಪ್ರಾಮಾಣಿಕ ನಾಯಕರಲ್ಲ ಎಂಬುದನ್ನು ದೆಹಲಿ ಸಿಎಂ ಅರಿತುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
“ಇದು ಅರವಿಂದ್ ಕೇಜ್ರಿವಾಲ್ ಅವರ PR ಸ್ಟಂಟ್. ದೆಹಲಿಯ ಜನರಲ್ಲಿ ಅವರ ಚಿತ್ರಣ ಪ್ರಾಮಾಣಿಕ ನಾಯಕನಲ್ಲ, ಭ್ರಷ್ಟ ನಾಯಕ ಎಂದು ಅವರು ಅರ್ಥಮಾಡಿಕೊಂಡಿದ್ದಾರೆ, ಇಂದು ಆಮ್ ಆದ್ಮಿ ಪಕ್ಷ (ಎಎಪಿ) ದೇಶಾದ್ಯಂತ ಭ್ರಷ್ಟ ಪಕ್ಷವೆಂದು ಗುರುತಿಸಲ್ಪಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ತಿಳಿಸಿದ್ದಾರೆ.
ಇದಲ್ಲದೆ, ಕೇಜ್ರಿವಾಲ್ ಅವರು ಸೋನಿಯಾ ಗಾಂಧಿ ಮಾದರಿಯನ್ನು ಅನ್ವಯಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲಿ ಅವರು ಮನಮೋಹನ್ ಸಿಂಗ್ ಅವರನ್ನು ಡಮ್ಮಿ ಪ್ರಧಾನಿ ಮಾಡಿ, ತೆರೆಮರೆಯಲ್ಲಿ ಸರ್ಕಾರವನ್ನು ನಡೆಸಿದರು. ಆಮ್ ಆದ್ಮಿ ಪಕ್ಷಕ್ಕೆ ತಾವು ದೆಹಲಿ ಚುನಾವಣೆಯಲ್ಲಿ ಸೋಲುತ್ತಿದ್ದೇವೆ ಎಂಬುದು ಗೊತ್ತಿದೆ ಮತ್ತು ಅವರು ಬೇರೆಯವರನ್ನು ಬಲಿಪಶು ಮಾಡಲು ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.
ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ವಿಧಿಸಿರುವ ಜಾಮೀನು ಷರತ್ತುಗಳಿಂದ ಯಾವುದೇ ಆಯ್ಕೆಯಿಲ್ಲದ ಕಾರಣ ರಾಜೀನಾಮೆ ನೀಡುತ್ತಿದ್ದಾರೆ. ತನ್ನ ಪತ್ನಿಯನ್ನು ಸಿಎಂ ಮಾಡುವಂತೆ ಎಲ್ಲಾ ಶಾಸಕರನ್ನು ಮನವೊಲಿಸಲು ಕೇಜ್ರಿವಾಲ್ ಪ್ರಯತ್ನಿಸುತ್ತಿದ್ದರಿಂದ ಎರಡು ದಿನಗಳ ಕಾಲಾವಕಾಶ ಕೇಳಿದ್ದಾರೆ ಎಂದು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಹೇಳಿದ್ದಾರೆ.
ಆರು ತಿಂಗಳ ಜೈಲು ಶಿಕ್ಷೆ
ಸುಮಾರು ಆರು ತಿಂಗಳ ಕಾಲ ಸೆರೆವಾಸದ ನಂತರ- ಲೋಕಸಭೆ ಚುನಾವಣೆಗೆ 21 ದಿನಗಳ ಬಿಡುಗಡೆಯನ್ನು ಹೊರತುಪಡಿಸಿ - ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿದ ಬಳಿಕ ಶುಕ್ರವಾರ ಕೇಜ್ರಿವಾಲ್ ತಿಹಾರ್‌ನಿಂದ ಹೊರ ಬಂದಿದ್ದಾರೆ. ಕೇಜ್ರಿವಾಲ್ ಕೊನೆಯದಾಗಿ ಜೂನ್ 2 ರಂದು ತಿಹಾರ್ ಜೈಲಿನಲ್ಲಿ ಶರಣಾಗುವ ಮೊದಲು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 2 ರವರೆಗೆ ಅವರಿಗೆ ಸುಪ್ರೀಂ ಕೋರ್ಟ್ ಮೇ ತಿಂಗಳಲ್ಲಿ ಮಧ್ಯಂತರ ಜಾಮೀನು ನೀಡಿತ್ತು.