Hema Committee fallout| ಮುಕೇಶ್ ರಾಜೀನಾಮೆಗೆ ಆಗ್ರಹ, ಪ್ರತಿಭಟನೆ ವೇಳೆ ಹಿಂಸಾಚಾರ
x

Hema Committee fallout| ಮುಕೇಶ್ ರಾಜೀನಾಮೆಗೆ ಆಗ್ರಹ, ಪ್ರತಿಭಟನೆ ವೇಳೆ ಹಿಂಸಾಚಾರ


ಕೊಲ್ಲಂ(ಕೇರಳ): ಯುವ ಕಾಂಗ್ರೆಸ್ ಕೊಲ್ಲಂ ಶಾಸಕ ಎಂ.ಮುಖೇಶ್ ರಾಜೀನಾಮೆಗೆ ಒತ್ತಾಯಿಸಿ ಅವರ ಕಚೇರಿಗೆ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ, ಹಿಂಸಾಚಾರ ನಡೆಯಿತು.

ಪೊಲೀಸರು ಚಳವಳಿಗಾರರ ವಿರುದ್ಧ ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳು ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ ಹತ್ತಿ ಶಾಸಕರ ಕಚೇರಿಗೆ ನುಗ್ಗಲು ಯತ್ನಿಸಿದ್ದರಿಂದ, ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಕಾಂಗ್ರೆಸ್ ಮತ್ತು ಬಿಜೆಪಿಯ ಯುವ ಮತ್ತು ಮಹಿಳಾ ಘಟಕಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ಬುಧವಾರ ರಾತ್ರಿ ಕೊಚ್ಚಿ ನಗರದ ಮರಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವರ್ಷಗಳ ಹಿಂದೆ ಮುಖೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆಕೆ ಆರೋಪಿಸಿದ್ದಳು.

ಹೇಮಾ ಸಮಿತಿ ವರದಿ: ನ್ಯಾಯಮೂರ್ತಿ ಕೆ. ಹೇಮಾ ಸಮಿತಿಯ ವರದಿ ಹಿನ್ನೆಲೆಯಲ್ಲಿ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಎಫ್‌ಐಆರ್‌ಗಳು ದಾಖಲಾಗಿವೆ. 2017 ರಲ್ಲಿ ನಟಿ ಮೇಲಿನ ಹಲ್ಲೆ ಪ್ರಕರಣದ ನಂತರ ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಮತ್ತು ಶೋಷಣೆ ನಿದರ್ಶನಗಳ ಪರಿಶೀಲನೆಗೆ ಕೇರಳ ಸರ್ಕಾರ ನ್ಯಾ.ಹೇಮಾ ಸಮಿತಿಯನ್ನು ರಚಿಸಿತು.ಆನಂತರ, ಆಗಸ್ಟ್ 25 ರಂದು ರಾಜ್ಯ ಸರ್ಕಾರ ತನಿಖೆಗೆ ಏಳು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ.

Read More
Next Story