ಒಂದು ದೇಶ ಒಂದು ಚುನಾವಣೆ: ರಾಷ್ಟ್ರಪತಿಗೆ ವರದಿ ಸಲ್ಲಿಸಿದ ಕೋವಿಂದ್‌ ನೇತೃತ್ವದ ಸಮಿತಿ
x
ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ಗುರುವಾರ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತು ವರದಿ ಸಲ್ಲಿಸಿತು.

ಒಂದು ದೇಶ ಒಂದು ಚುನಾವಣೆ: ರಾಷ್ಟ್ರಪತಿಗೆ ವರದಿ ಸಲ್ಲಿಸಿದ ಕೋವಿಂದ್‌ ನೇತೃತ್ವದ ಸಮಿತಿ

ಒಂದು ದೇಶ, ಒಂದು ಚುನಾವಣೆ ಕುರಿತಾದ 18,000 ಪುಟಗಳನ್ನು ಒಳಗೊಂಡ ವರದಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೋವಿಂದ್‌ ನೇತೃತ್ವದ ಸಮಿತಿ ಸಲ್ಲಿಸಿದೆ.


Click the Play button to hear this message in audio format

ಗುರುವಾರ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು 'ಒಂದು ದೇಶ, ಒಂದು ಚುನಾವಣೆ 'ಕುರಿತಾದ 18,000 ಪುಟಗಳನ್ನು ಒಳಗೊಂಡ ವರದಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಸಲ್ಲಿಸಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ದೇಶಾದ್ಯಂತ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ತನ್ನ ವರದಿಯನ್ನು ಸಲ್ಲಿಸಿದೆ.

ಸಮಿತಿಯ ಶಿಫಾರಸ್ಸುಗಳೇನು?

ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ಗುರುವಾರ (ಮಾರ್ಚ್ 14) ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತು ವರದಿ ಸಲ್ಲಿಸಿತು.

ಸಮಿತಿಯು ಲೋಕಸಭೆ ಮತ್ತು ರಾಜ್ಯ ಅಸೆಂಬ್ಲಿಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಬೇಕು. ಅದು ಪೂರ್ಣಗೊಂಡ ೧೦೦ ದಿನಗಳಲ್ಲಿ ಪುರಸಭೆ ಚುನಾವಣೆ ಮತ್ತು ಪಂಚಾಯತ್ ಚುನಾವಣೆಗಳು ನಡೆಯಬೇಕು ಎಂದು ತಿಳಿಸಿದೆ. ಸಮಿತಿಯು ವರದಿಯಲ್ಲಿ ನೀಡಿರುವ ಸಲಹೆಗಳ ಅನುಷ್ಠಾನವನ್ನು ಪರಿಶೀಲಿಸಲು ಇಂಪ್ಲಿಮೆಂಟೇಶನ್ ಗ್ರೂಪ್ ಅನ್ನು ಸ್ಥಾಪಿಸಲು ಶಿಫಾರಸು ಮಾಡಿದೆ.

ರಾಷ್ಟ್ರಪತಿ ಕೋವಿಂದ್‌ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇದ್ದರು.

Read More
Next Story