ಭೂ ಹಗರಣ: ಲಾಲು ಪ್ರಸಾದ್, ತೇಜಸ್ವಿ ಯಾದವ್ ವಿರುದ್ಧ ದೋಷಾರೋಪ ಸಲ್ಲಿಕೆ
x

ಭೂ ಹಗರಣ: ಲಾಲು ಪ್ರಸಾದ್, ತೇಜಸ್ವಿ ಯಾದವ್ ವಿರುದ್ಧ ದೋಷಾರೋಪ ಸಲ್ಲಿಕೆ

ಲಾಲು ಪ್ರಸಾದ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ, ಮಧ್ಯಪ್ರದೇಶದ ಜಬಲ್‌ಪುರದಲ್ಲಿ ರೈಲ್ವೆಯ ಪಶ್ಚಿಮ ಕೇಂದ್ರ ವಲಯದಲ್ಲಿ ಮಾಡಿದ ಗ್ರೂಪ್ ಡಿ ನೇಮಕಗಳಿಗೆ ಈ ಪ್ರಕರಣ ಸಂಬಂಧಿಸಿದೆ.


ಹೊಸದಿಲ್ಲಿ: ಉದ್ಯೋಗಕ್ಕಾಗಿ ಜಮೀನು ಹಗರಣದಲ್ಲಿ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್‌, ಅವರ ಪುತ್ರ ತೇಜಸ್ವಿ ಯಾದವ್‌ ಮತ್ತು ಇತರ ಎಂಟು ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರ ಮುಂದೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಯಿತು. ಅವರು ವಿಷಯವನ್ನು ಆಗಸ್ಟ್ 13 ರಂದು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ಹೇಳಿದರು.

ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್‌, ಇಡಿ ಪ್ರಕರಣದ ಮೂಲ.

ಲಾಲು ಪ್ರಸಾದ್ ಅವರು 2004-2009 ರವರೆಗೆ ರೈಲ್ವೆ ಸಚಿವರಾಗಿದ್ದಾಗ, ಮಧ್ಯಪ್ರದೇಶದ ಜಬಲ್‌ಪುರದಲ್ಲಿ ರೈಲ್ವೆಯ ಪಶ್ಚಿಮ ಕೇಂದ್ರ ವಲಯದಲ್ಲಿ ಮಾಡಿದ ಗ್ರೂಪ್ ಡಿ ನೇಮಕಗಳಿಗೆ ಈ ಪ್ರಕರಣ ಸಂಬಂಧಿಸಿದೆ. ನೇಮಕಗೊಂಡವರು ಆರ್‌ಜೆಡಿ ಮುಖ್ಯಸ್ಥರ ಕುಟುಂಬ ಅಥವಾ ಸಹವರ್ತಿಗಳಿಗೆ ಜಮೀನು ಉಡುಗೊರೆಯಾಗಿ ನೀಡಿದ್ದಾರೆ ಅಥವಾ ವರ್ಗಾಯಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ದೂರಿದೆ.

Read More
Next Story