Lok Sabha Election Results 2024 Live: ಇಂಡಿಯಾ ಬ್ಲಾಕ್ (200) ಚೇತರಿಕೆ; ಎನ್‌ಡಿಎ (290) ಮುನ್ನಡೆ
x

Lok Sabha Election Results 2024 Live: ಇಂಡಿಯಾ ಬ್ಲಾಕ್ (200) ಚೇತರಿಕೆ; ಎನ್‌ಡಿಎ (290) ಮುನ್ನಡೆ


ದೇಶದಾದ್ಯಂತ ಎರಡು ತಿಂಗಳ ಕಾಲ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ನಾಯಕರ ರಾಜಕೀಯ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇಂದು ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ʻದ ಫೆಡರಲ್‌ ಕರ್ನಾಟಕʼ ವೆಬ್‌ ಪೋರ್ಟಲ್‌ನಲ್ಲಿ ಲಭ್ಯ.

ಮತ ಎಣಿಕೆ ಕಾರ್ಯಕ್ಕಾಗಿ ಚುನಾವಣಾ ಆಯೋಗ ವ್ಯಾಪಕ ತಯಾರಿ ಮಾಡಿಕೊಂಡಿದ್ದು, ಆಯಾ ಲೋಕಸಭಾ ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತಪೆಟ್ಟಿಗೆಗಳನ್ನು ಇಟ್ಟಿರುವ ಮತ ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ಮತ ಎಣಿಕೆ ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವ್ಯಾಪಕ ಬಂದೋಬಸ್ತಿನ ಏರ್ಪಾಡು ಕೂಡ ಆಗಿದೆ.

ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ..

Lok Sabha Election Results 2024



Live Updates

  • 4 Jun 2024 3:17 AM GMT

    ಮಹಾರಾಷ್ಟ್ರ:ಎನ್‌ ಡಿಎ 22, ಇಂಡಿಯ 21 ಮುನ್ನಡೆ

  • 4 Jun 2024 3:11 AM GMT

    ಪಶ್ಚಿಮ ಬಂಗಾಳ: ಟಿಎಂಸಿ 14, ಬಿಜೆಪಿ 16, ಕಾಂಗ್ರೆಸ್‌ 1ರಲ್ಲಿ ಮುನ್ನಡೆ

    ಕೃಷ್ಣನಗರದಲ್ಲಿ ಮಹುವಾ ಮೊಯಿತ್ರಾ, ಬಹ್ರಾಂಪುರದಲ್ಲಿ ಅಧಿರ್‌ ರಂಜನ್‌ ಚೌಧರಿ ಮುನ್ನಡೆ

  • 4 Jun 2024 2:37 AM GMT

    ಅಭ್ಯರ್ಥಿಗಳು ಒತ್ತಾಯದಿಂದ ಹಿಂದೆ ಸರಿದಿದ್ದರೆ ಮಧ್ಯಪ್ರವೇಶ: ಚುನಾವಣೆ ಆಯೋಗ

    ಹೊಸದಿಲ್ಲಿ: ಅಭ್ಯರ್ಥಿಗಳು ಬಲವಂತವಾಗಿ ನಾಮಪತ್ರ ಹಿಂತೆಗೆದುಕೊಂಡಾಗ ಮಾತ್ರ ಚುನಾವಣೆ ಆಯೋಗ ಕ್ರಮಕೈಗೊಳ್ಳುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

    ಅವಿರೋಧ ಆಯ್ಕೆ ಸಂದರ್ಭದಲ್ಲಿ ವ್ಯಕ್ತಿಯನ್ನು ವಿಜೇತ ಎಂದು ಘೋಷಿಸುವುದನ್ನು ತಡೆಯುವ ಯಾವುದೇ ನಿಬಂಧನೆಗೆ ಕಾನೂನಿನ ಸಮ್ಮತಿ ಇಲ್ಲ ಎಂದು ಮತದಾರರರಿಗೆ 'ಮೇಲಿನ ಯಾವುದೂ ಇಲ್ಲ' ಆಯ್ಕೆ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿದರು.

    ಲೋಕಸಭೆ ಚುನಾವಣೆಯಲ್ಲಿ ಸೂರತ್‌ನ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆದ್ದಿದ್ದಾರೆ.

    ʻಸ್ಪರ್ಧೆ ಇರಬೇಕು. ಅದರಲ್ಲಿ ಯಾವುದೇ ಸಂದೇಹವಿಲ್ಲ. ಗೆಲುವಿನಲ್ಲಿ ಹೆಮ್ಮೆ ಇಲ್ಲದಿದ್ದರೆ ಹೇಗೆ? ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ದಿನ, ಅಭ್ಯರ್ಥಿ ಉಮೇದುವಾರಿಕೆ ವಾಪಸ್‌ ಪಡೆದರೆ ನಾವೇನು ಮಾಡಬೇಕು? ಅವರು ಇಷ್ಟಪಟ್ಟು ಮಾಡಿದ್ದರೆ, ಅದು ನನಗೆ ಹೇಗೆ ತಿಳಿಯುತ್ತದೆ?,ʼ ಎಂದು ಹೇಳಿದರು.

  • 4 Jun 2024 1:43 AM GMT

    ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ನಡೆದಿದ್ದು, 543 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದಲ್ಲಿ ಮತದಾನ ನಡೆದಿತ್ತು. ಏ.19ರಂದು ಮೊದಲ ಹಂತದಲ್ಲಿ 102 ಕ್ಷೇತ್ರ, ಏಪ್ರಿಲ್ 26ರಂದು 2ನೇ ಹಂತದಲ್ಲಿ 89 ಕ್ಷೇತ್ರ, ಮೇ 7ರಂದು 3ನೇ ಹಂತದಲ್ಲಿ 94 ಕ್ಷೇತ್ರ, ಮೇ 13ರಂದು 4ನೇ ಹಂತದಲ್ಲಿ 96 ಕ್ಷೇತ್ರ, ಮೇ 20ರಂದು 5ನೇ ಹಂತದಲ್ಲಿ 49 ಕ್ಷೇತ್ರ, ಮೇ 25ರಂದು 6ನೇ ಹಂತದಲ್ಲಿ 56 ಕ್ಷೇತ್ರ ಹಾಗೂ ಜೂನ್ 1ರಂದು ಅಂತಿಮ ಹಂತದಲ್ಲಿ 57 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ರಾಜ್ಯದ 28 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಏ. 26, ಮೇ 7ರಂದು ಮತದಾನ ನಡೆದಿತ್ತು. ರಾಜ್ಯದ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 474 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಶೇ.70.64ರಷ್ಟು ಮತದಾನವಾಗಿತ್ತು.ಒಡಿಶಾ, ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಕೂಡ ನಡೆಯುತ್ತಿದೆ.

Read More
Next Story