Maha Kumbh: ಮಹಾಕುಂಭ ಮೇಳದಲ್ಲಿ ಭೀಕರ ಅಗ್ನಿ ಅವಘಡ, ಡೇರೆಗಳು ಭಸ್ಮ
x
ಡೇರೆಗಳಿಗೆ ಬೆಂಕಿ ತಗುಲಿರುವುದು.

Maha Kumbh: ಮಹಾಕುಂಭ ಮೇಳದಲ್ಲಿ ಭೀಕರ ಅಗ್ನಿ ಅವಘಡ, ಡೇರೆಗಳು ಭಸ್ಮ

Maha Kumbh : ಬೆಂಕಿ ಅನಾಹುತದಿಂದಾಗಿ ಪವಿತ್ರ ನಗರದಲ್ಲಿ ಗೊಂದಲ ಸೃಷ್ಟಿಯಾಗಿದೆ. ಬೆಂಕಿ ಕಾಣಿಸಿಕೊಂಡ ಮಹಾ ಕುಂಭದ ಟೆಂಟ್ ನಗರದವಾಗಿರುವ ಸೆಕ್ಟರ್ 19ಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಜಮಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿವೆ.


ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಧಾರ್ಮಿಕ ಉತ್ಸವ ಮಹಾ ಕುಂಭ ಮೇಳದಲ್ಲಿ ಭಾನುವಾರ ಸಂಜೆ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. ಡೇರೆಗಳು ಹಾಕಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಹಲವಾರು ಶಿಬಿರಗಳು ಸುಟ್ಟುಹೋಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಬೆಂಕಿ ಅನಾಹುತದಿಂದಾಗಿ ಪವಿತ್ರ ನಗರದಲ್ಲಿ ಗೊಂದಲ ಸೃಷ್ಟಿಯಾಗಿದೆ. ಬೆಂಕಿ ಕಾಣಿಸಿಕೊಂಡ ಮಹಾ ಕುಂಭದ ಟೆಂಟ್ ನಗರದವಾಗಿರುವ ಸೆಕ್ಟರ್ 19ಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಜಮಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿವೆ.

"ಮಹಾ ಕುಂಭ ಮೇಳದ ಸೆಕ್ಟರ್ 19ರಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ಸ್ಫೋಟಗೊಂಡ ಕಾಋಣ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಮತ್ತು ಯಾರೂ ಗಾಯಗೊಂಡಿಲ್ಲ" ಎಂದು ಪ್ರಯಾಗ್ರಾಜ್ ವಲಯದ ಎಡಿಜಿ ಭಾನು ಭಾಸ್ಕರ್ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಸಮನ್ವಯದೊಂದಿಗೆ ತಕ್ಷಣ ಬೆಂಕಿ ಶಮನದ ಪ್ರಯತ್ನಗಳನ್ನು ನಡೆಸಲಾಗಿದೆ. ಬೆಂಕಿ ಇನ್ನಷ್ಟು ಪ್ರದೇಶಗಳಿಗೆ ಹರಡುವ ಮೊದಲೇ ನಂದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಬೆಂಕಿಯಿಂದ ಉಂಟಾಗಿರುವ ದಟ್ಟ ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಆರಂಭಿಕ ವರದಿಗಳ ಪ್ರಕಾರ, ಶಿಬಿರದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದು ಹರಡಿ ಆ ಪ್ರದೇಶದಲ್ಲಿ ಸ್ಥಾಪಿಸಲಾದ ಹಲವಾರು ಡೇರೆಗಳಿಗೆ ಆವರಿಸಿದೆ. ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಅಧಿಕಾರಿಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌) ತಂಡವೂ ಸ್ಥಳಕ್ಕೆ ಆಗಮಿಸಿದೆ.

ಸಮೀಪದ ರೈಲು ಸೇತುವೆಯ ಮೇಲೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಸೆರೆಹಿಡಿದ ವೀಡಿಯೊದಲ್ಲಿ ಕ್ಯಾಂಪ್ ಸೈಟ್ ನಲ್ಲಿ ಭಾರಿ ಬೆಂಕಿ ಜ್ವಾಲೆಗಳು ಆವರಿಸಿರುವುದು ಕಾಣಬಹುದು. ಘಟನೆಯಲ್ಲಿ ಹಲವಾರು ಡೇರೆಗಳು ಸುಟ್ಟು ಬೂದಿಯಾಗಿದೆ.

ಭಕ್ತರು ಸುರಕ್ಷಿತ ಸ್ಥಳಕ್ಕೆ

ಬೆಂಕಿ ತಗುಲಿದ ತಕ್ಷಣ ಸುತ್ತಮುತ್ತಲಿನ ಡೇರೆಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದೂ ಹೇಳಿದ್ದಾರೆ.

ಮಹಾ ಕುಂಭ 2025 ರ ಅಧಿಕೃತ ಎಕ್ಸ್ ಹ್ಯಾಂಡಲ್ ಈ ಬಗ್ಗೆ ಪೋಸ್ಟ್ ಮಾಡಿದೆ, "ತುಂಬಾ ದುಃಖಕರ ಸಂಗತಿ., ಅಗ್ನಿ ದುರಂತ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ತಕ್ಷಣದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಮಾಡಲಾಗಿದೆ. ಎಲ್ಲರ ಸುರಕ್ಷತೆಗಾಗಿ ನಾವು ಗಂಗಾ ಮಾತೆಯನ್ನು ಪ್ರಾರ್ಥಿಸುತ್ತೇವೆ". ಎಂದು ಬರೆಯಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಪೀಡಿತರಿಗೆ ಸಹಾಯ ನೀಡುವಂತೆ ಸೂಚಿಸಿದ್ದಾರೆ

Read More
Next Story