ತಮಿಳುನಾಡು ದಿಂಡಗಲ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ; ಮಗು ಸೇರಿ 6 ಮಂದಿ ಸಜೀವ ದಹನ
ದಿಂಡಗಲ್ ತಿರುಚಿ ರಸ್ತೆಯಲ್ಲಿರುವ ಸಿಟಿ ಆರ್ಥೋ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಾವು ನೋವಿನ ಪ್ರಮಾಣ ಇನ್ನೂ ಹೆಚ್ಚಬಹುದು ಎಂಬ ಭೀತಿ ಎದುರಾಗಿದೆ.
ತಮಿಳುನಾಡಿನ ದಿಂಡಗಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಗುರವಾರ ರಾತ್ರಿ ಭಾರೀ ಆಗ್ನಿ ಅವಘಡ ಸಂಭವಿಸಿದ್ದು, ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಜೀವ ದಹವನಾಗಿದ್ದಾರೆ.
ದಿಂಡಗಲ್ ತಿರುಚಿ ರಸ್ತೆಯಲ್ಲಿರುವ ಸಿಟಿ ಆರ್ಥೋ ಆಸ್ಪತ್ರೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಾವು ನೋವಿನ ಪ್ರಮಾಣ ಇನ್ನೂ ಹೆಚ್ಚಬಹುದು ಎಂಬ ಭೀತಿ ಎದುರಾಗಿದೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ಅಲ್ಲಿನ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು ಹಾಗೂ ಅಗ್ನಿಶಾಮಕ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಘಟನೆಯ ಕಾರಣ ಸ್ಪಷ್ಟವಾಗಿ ಗೊತ್ತಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ರಕ್ಷಣಾ ಸಿಬ್ಬಂದಿ ಆಸ್ಪತ್ರೆಯ ರೋಗಿಗಳನ್ನು ಸ್ಥಳಾಂತರ ಮಾಡುತ್ತಿದ್ದು, ದಿಂಡಗಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ರಾತ್ರಿ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ, "ನಾವು ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಘಟನೆಯಲ್ಲಿ ಸಿಕ್ಕಿಹಾಕಿಕೊಂಡಿರುವ ಪ್ರತಿಯೊಬ್ಬರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದ್ದೇವೆ" ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ವರದಿ ಪ್ರಕಟಣೆ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದೆ. ಸಾವು ನೋವಿನ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.