ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ ಇಂದು ಭೇಟಿ ಸಾಧ್ಯತೆ
x

ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ ಇಂದು ಭೇಟಿ ಸಾಧ್ಯತೆ


ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಶುಕ್ರವಾರ) ಸಂಜೆ ಇಲ್ಲಿನ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಧಾನಿ ಶುಕ್ರವಾರದಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಹೂಗ್ಲಿ ಮತ್ತು ನಾಡಿಯಾ ಜಿಲ್ಲೆಗಳಲ್ಲಿ ಎರಡು ಸಾರ್ವಜನಿಕ ಸಭೆಗಳಲ್ಲಿ ಮಾತನಾಡಲಿದ್ದಾರೆ ಮತ್ತು ಹಲವಾರು ಸರ್ಕಾರಿ ಯೋಜನೆಗಳನ್ನು ಉದ್ಘಾಟಿಸಲಿದ್ದು, ಶುಕ್ರವಾರ ರಾತ್ರಿ ಕೋಲ್ಕತ್ತಾದ ರಾಜಭವನದಲ್ಲಿ ತಂಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ʻಇಂದು ಸಂಜೆ ಪ್ರಧಾನಿಯನ್ನು ಭೇಟಿ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜಭವನಕ್ಕೆ ಬರುವ ಸಾಧ್ಯತೆಯಿದೆ. ಈ ಸಭೆಯು ಪ್ರೋಟೋಕಾಲ್ ಪ್ರಕಾರ ಇರುತ್ತದೆ. ಆದರೆ ಸಭೆಯ ಸಮಯ ಇನ್ನೂ ನಿಗದಿಯಾಗಿಲ್ಲʼʼ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಬ್ಯಾನರ್ಜಿ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲು ನವದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ್ದರು. ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯ ಬಾಕಿ ಹಣವನ್ನು ಕೇಂದ್ರವು ತಡೆಹಿಡಿದಿದ್ದ ವಿಚಾರ ಕಳೆದ ವರ್ಷ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.

Read More
Next Story