ರಸ್ತೆ ಅಪಘಾತದಲ್ಲಿ ಒಲಿಂಪಿಯನ್‌ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು
x
ಕಾರು ಗುದ್ದಿ ಪಲ್ಟಿಯಾಗಿರುವುದು.

ರಸ್ತೆ ಅಪಘಾತದಲ್ಲಿ ಒಲಿಂಪಿಯನ್‌ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು

ಹರಿಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನು ಅವರ ಅಜ್ಜಿ ಹಾಗೂ ಚಿಕ್ಕಪ್ಪ ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರು ಡಿಕ್ಕಿಯಾಗಿದೆ.


ತಮ್ಮ ಕ್ರೀಡಾ ಸಾಧನೆಗಾಗಿ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಎರಡು ದಿನಗಳ ಬಳಿಕ ಒಲಿಂಪಿಯನ್ ಮನು ಭಾಕರ್ ಅವರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ.

ಭಾರತೀಯ ಉದಯೋನ್ಮುಖ ಶೂಟರ್ ಮತ್ತು ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಅವರ ಅಜ್ಜಿ ದಯಾ ಕೌರ್ ಮತ್ತು ಅವರ ಚಿಕ್ಕಪ್ಪ ಜೈದೀಪ್ ಭಾನುವಾರ (ಜನವರಿ 19) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಹರಿಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನು ಅವರ ಅಜ್ಜಿ ಹಾಗೂ ಚಿಕ್ಕಪ್ಪ ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರು ಡಿಕ್ಕಿಯಾಗಿದೆ.

ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಕಾರಿನ ಚಾಲಕ ಮಗುಚಿಬಿದ್ದ ಕಾರಿನಿಂದ ಹೊರಕ್ಕೆ ಬಂದು ಪರಾರಿಯಾಗಿದ್ದಾನೆ.

manu bhaker,manu bhaker family accident,manu bhakar accident,manu bhakar accident breaking,shooter manu bhaker,manu bhaker relatives in road accident,manu bhaker grandmother,manu bhaker news,manu bhakar relative road accident death,road accident,manu bhaker shooter,manu bhaker interview,manu bhaker mama accident,manu bhaker shooting,manu bhakar,haryana accident news,manu bhaker age,manu bhaker family,manu bhaker khel ratna,manu bhaker latest news

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮನು ಭಾಕರ್ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆದ ಎರಡು ದಿನಗಳ ನಂತರ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.

ಪ್ಯಾರಿಸ್ 2024 ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಮತ್ತು ಮಿಶ್ರ ತಂಡ ಸ್ಪರ್ಧೆಗಳಲ್ಲಿ ಎರಡು ಕಂಚಿನ ಪದಕಗಳು ಸೇರಿದಂತೆ ಅವರ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಅಪಘಾತದ ಸುದ್ದಿ ತಿಳಿದ ಸ್ಥಳೀಯ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ಅವರು ಆ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಬಳಿಕ ಮರಣೋತ್ತರ ಪರೀಕ್ಷೆಗಳಿಗಾಗಿ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಗರ ಪೊಲೀಸ್ ಠಾಣೆಯ ಉಸ್ತುವಾರಿ ಘಟನೆಯ ಬಗ್ಗೆ ಸಮಗ್ರ ತನಿಖೆ ಪ್ರಾರಂಭಿಸಿದ್ದಾರೆ. ಡಿಕ್ಕಿಗೆ ಕಾರಣವಾದ ಪರಾರಿಯಾಗಿರುವ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.

Read More
Next Story