Caste Census | ತೆಲಂಗಾಣದಲ್ಲಿ ಮೆಗಾ ಜಾತಿಗಣತಿ ನ.6ರಿಂದ ಆರಂಭ
x

Caste Census | ತೆಲಂಗಾಣದಲ್ಲಿ ಮೆಗಾ ಜಾತಿಗಣತಿ ನ.6ರಿಂದ ಆರಂಭ

ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು, ಎಲ್ಲಾ ಜಾತಿಗಳ ಮೆಗಾ ಆರೋಗ್ಯ ತಪಾಸಣೆ ಶಿಬಿರದಂತೆ ಜಾತಿ ಗಣತಿ ನಡೆಯಲಿದೆ. ಸಂಬಂಧಪಟ್ಟ ಇಲಾಖೆಗಳು ತಿಂಗಳ ಅಂತ್ಯದೊಳಗೆ ಜಾತಿಗಣತಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದ್ದರು.


ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಕನಸಿನ ಯೋಜನೆಯಾದ ರಾಜ್ಯವಾರು ಜಾತಿ ಗಣತಿ ಸಮೀಕ್ಷೆಗೆ ತೆಲಂಗಾಣ ರಾಜ್ಯ ಮುಂದಡಿ ಇಟ್ಟಿದೆ. ನ.6 ರಿಂದ ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಜಾತಿಗಣತಿ ನಡೆಸಲು ನಿರ್ಧರಿಸಲಾಗಿದೆ ಎಂದು ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಘೋಷಿಸಿದ್ದಾರೆ.

ತೆಲಂಗಾಣದ ಸಾಮಾಜಿಕ, ಆರ್ಥಿಕ ಸಮೀಕ್ಷೆಯು ಸರ್ಕಾರದ ನೀತಿ ಹಾಗೂ ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕೆ ಸಾಕ್ಷಿಯಾಗಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ವಿಕ್ರಮಾರ್ಕ ಅವರು ಯಾವುದೇ ದೋಷಗಳಿಲ್ಲದೆ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಕರೆ ನೀಡಿದರು.

ಬುಧವಾರ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು, ಎಲ್ಲಾ ಜಾತಿಗಳ ಮೆಗಾ ಆರೋಗ್ಯ ತಪಾಸಣೆ ಶಿಬಿರದಂತೆ ಜಾತಿ ಗಣತಿ ನಡೆಯಲಿದೆ. ಸಂಬಂಧಪಟ್ಟ ಇಲಾಖೆಗಳು ತಿಂಗಳ ಅಂತ್ಯದೊಳಗೆ ಜಾತಿಗಣತಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದ್ದರು.

ತೆಲಂಗಾಣ ನಡೆಯುವ ಜಾತಿಗಣತಿ ಮಾದರಿಯು ರಾಹುಲ್ ಗಾಂಧಿ ಅವರನ್ನು ಭವಿಷ್ಯದ ಪ್ರಧಾನಿಯನ್ನಾಗಿ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಲೋಕಸಭೆ ಚುನಾವಣೆ ಅವಧಿಯಲ್ಲಿ ರಾಹುಲ್‌ ಗಾಂಧಿ ಅವರು ದೇಶದ ಎಲ್ಲಾ ರಾಜ್ಯಗಳಲ್ಲೂ ಜಾತಿ ಸಮೀಕ್ಷೆ ನಡೆಸುವುದಾಗಿ ಭರವಸೆ ನೀಡಿದ್ದರು.

80 ಸಾವಿರ ಸರ್ಕಾರಿ ನೌಕರರ ಬಳಕೆ

ತೆಲಂಗಾಣ ಸರ್ಕಾರ ಕೈಗೆತ್ತಿಕೊಂಡಿರುವ ಜಾತಿ ಸಮೀಕ್ಷೆಗೆ ಸುಮಾರು 80,000 ಸರ್ಕಾರಿ ನೌಕರರನ್ನು ನಿಯೋಜಿಸಲಾಗುವುದು. ಸಿಬ್ಬಂದಿಗೆ ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಶಾಲೆಗಳಲ್ಲಿ ಬೋಧನೆಗೆ ತೊಂದರೆಯಾಗದಂತೆ ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇವರೊಂದಿಗೆ ಇತರೆ ಇಲಾಖೆಗಳ ಸಿಬ್ಬಂದಿಯನ್ನು ಬಳಸಿಕೊಳ್ಳುವ ಯೋಜನೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗವು ಜಾತಿಗಣತಿ ಸಂಬಂಧ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘ ಸಂಸ್ಥೆಗಳಿಂದ ಅಭಿಪ್ರಾಯ ಸ್ವೀಕರಿಸಲು ಸಾರ್ವಜನಿಕ ವಿಚಾರಣೆ ಪ್ರಾರಂಭಿಸಿದೆ.

Read More
Next Story