Terror Threat| ಮುಂಬೈಯಲ್ಲಿ ಭದ್ರತೆ ಹೆಚ್ಚಳ
x

Terror Threat| ಮುಂಬೈಯಲ್ಲಿ ಭದ್ರತೆ ಹೆಚ್ಚಳ


ಕೇಂದ್ರ ಗುಪ್ತಚರ ಸಂಸ್ಥೆಗಳು ಸಂಭವನೀಯ ಭಯೋತ್ಪಾದನೆ ದಾಳಿ ಬಗ್ಗೆ ಎಚ್ಚರಿಸಿದ ಬಳಿಕ ಮುಂಬೈ ಪೊಲೀಸರು ಹಲವು ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕೆಲವು ಸ್ಥಳಗಳಲ್ಲಿ ʻಅಣಕು ಕಾರ್ಯಾಚರಣೆʼ ನಡೆಸಲು ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಯಾ ವಲಯಗಳಲ್ಲಿ ಹೆಚ್ಚು ಜಾಗರೂಕರಾಗಿರಲು ನಗರದ ಉಪ ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ದೇಶದ ಆರ್ಥಿಕ ರಾಜಧಾನಿಯ ದೇವಾಲಯಗಳ ಸುತ್ತಮುತ್ತ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ನಿಗಾ ಇಡಲು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ.

ಜನದಟ್ಟಣೆಯ ಕ್ರಾಫರ್ಡ್ ಮಾರುಕಟ್ಟೆ ಪ್ರದೇಶದಲ್ಲಿ ಪೊಲೀಸರು ಶುಕ್ರವಾರ (ಸೆಪ್ಟೆಂಬರ್ 27) ಅಣಕು ಡ್ರಿಲ್ ನಡೆಸಿದರು. ಈ ಪ್ರದೇಶದಲ್ಲಿ ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು ಇವೆ. ಹಬ್ಬ ಹರಿದಿನಗಳ ಹಿನ್ನೆಲೆಯಲ್ಲಿ ಮುಂಜಾಗರೂಕತೆ ವಹಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಮುಂಬರುವ ವಾರಗಳಲ್ಲಿ ದುರ್ಗಾ ಪೂಜೆ, ದಸರಾ ಮತ್ತು ದೀಪಾವಳಿ ಹಬ್ಬಗಳನ್ನು ಆಚರಿಸಲು ಸಜ್ಜಾಗಿದೆ.

Read More
Next Story