ಕೇಜ್ರಿವಾಲ್ ಗೆ ಜಾಮೀನು ಮರೀಚಿಕೆ; ಹೈಕೋರ್ಟ್ ಆದೇಶದ ಬಳಿಕ ಸುಪ್ರೀಂ ಅರ್ಜಿ ವಿಚಾರಣೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿಗೆ ಮಧ್ಯಂತರ ತಡೆ ನೀಡಿರುವ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜೂನ್ 26 ರಂದು ನಡೆಸಲಿದೆ.
ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಎಸ್.ವಿ.ಎನ್. ಭಟ್ಟಿ ಅವರ ರಜಾಕಾಲದ ಪೀಠವು, ಈ ವಿಷಯ ಕುರಿತು ಹೈಕೋರ್ಟ್ ಆದೇಶಕ್ಕೆ ಕಾಯಲಿದ್ದೇವೆ ಎಂದು ಹೇಳಿದೆ.
ಕೇಜ್ರಿವಾಲ್ ಪರ ವಾದಿಸಿದ ವಕೀಲ ಅಭಿಷೇಕ್ ಸಿಂಘ್ವಿ, ಜಾಮೀನು ಆದೇಶದ ಮೇಲಿನ ಮಧ್ಯಂತರ ತಡೆಯನ್ನು ತೆರವು ಮಾಡುವಂತೆ ಕೋರಿದರು.
ಇಡಿ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಕೇಜ್ರಿವಾಲ್ ಅವರ ಮನವಿಯನ್ನು ವಿರೋಧಿಸಿದರು. ಹೈಕೋರ್ಟ್ ತನ್ನ ತೀರ್ಪು ಪ್ರಕಟಿಸಬೇಕಿದೆ ಎಂದು ಹೇಳಿದರು. ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ)ದಿಂದ ಬಂಧಿಸಲ್ಪಟ್ಟಿದ್ದ ಕೇಜ್ರಿವಾಲ್, ಹೈಕೋರ್ಟ್ ಮಧ್ಯಂತರ ತಡೆ ನೀಡದಿದ್ದರೆ ಕಳೆದ ಶುಕ್ರವಾರ ತಿಹಾರ್ ಜೈಲಿನಿಂದ ಬಿಡುಗಡೆ ಆಗಬಹುದಿತ್ತು.
Next Story