
ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶ: ರಸ್ತೆ ಅಪಘಾತದಲ್ಲಿ 10 ಮಂದಿ ಸಾವು, 27 ಮಂದಿ ಗಾಯ
ಇಲ್ಲಿನ ಸೇಲಂಪುರದಲ್ಲಿ ಭಾನುವಾರ ಪಿಕಪ್ ವ್ಯಾನ್‌ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಲಂದ್‌ಶಹರ್: ಇಲ್ಲಿನ ಸೇಲಂಪುರದಲ್ಲಿ ಭಾನುವಾರ ಪಿಕಪ್ ವ್ಯಾನ್‌ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಡೌನ್-ಮೀರತ್ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
"ಅಪಘಾತದಲ್ಲಿ ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಪ್ರತಿಕ್ರಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಅವರಿಗೆ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
Next Story