ರಷ್ಯಾ-ಉಕ್ರೇನ್ ಶಾಂತಿ ಮಾತುಕತೆಗಾಗಿ ಮಾಸ್ಕೋಗೆ ಭದ್ರತಾ ಸಲಹೆಗಾರ ಅಜಿತ್ ದೋವಲ್?
x
ಅಜಿತ್ ದೋವಲ್

ರಷ್ಯಾ-ಉಕ್ರೇನ್ ಶಾಂತಿ ಮಾತುಕತೆಗಾಗಿ ಮಾಸ್ಕೋಗೆ ಭದ್ರತಾ ಸಲಹೆಗಾರ ಅಜಿತ್ ದೋವಲ್?

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಈ ವಾರ ಮಾಸ್ಕೋಗೆ ಭೇಟಿ ನೀಡುವ ಸಾಧ್ಯತೆಯಿದೆ ಹಾಗೂ ಎರಡು ವರ್ಷಗಳಿಂದ ಕಾದಾಡುತ್ತಿರುವ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಮತ್ತು ಯುದ್ಧವನ್ನು ಕೊನೆಗೊಳಿಸಲು ಸಹಾಯ ಮಾಡುವ ಚರ್ಚೆಗಳಲ್ಲಿ ಭಾಗವಹಿಸುವ ಸಾಧ್ಯತೆಯಿದೆ


Click the Play button to hear this message in audio format

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಪರಿಹರಿಸಿ ಶಾಂತಿ ನೆಲೆಸುವಲ್ಲಿ ಭಾರತವು ಮಧ್ಯಸ್ಥಿಕೆ ವಹಿಸುತ್ತದೆ ಎಂದು ಎಲ್ಲಾ ದೇಶಗಳು ಅಂದುಕೊಂಡಿರುವ ಸಂದರ್ಭದಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಈ ವಾರ ಮಾಸ್ಕೋಗೆ ಭೇಟಿ ನೀಡುವ ಸಾಧ್ಯತೆಯಿದೆ. ಎರಡು ವರ್ಷಗಳಿಂದ ಕಾದಾಡುತ್ತಿರುವ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಮತ್ತು ಯುದ್ಧವನ್ನು ಕೊನೆಗೊಳಿಸಲು ಸಹಾಯ ಮಾಡುವ ಚರ್ಚೆಗಳಲ್ಲಿ ದೋವಲ್ ಭಾಗವಹಿಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ಸಮಯದಲ್ಲಿಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದರು. ಇದಾದ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿ ಭಾರತವು ತನ್ನ ರಾಷ್ಟ್ರೀಯ ಭದ್ರತಾ ಸಂಸ್ಥೆ ಅಥವಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅನ್ನು ರಷ್ಯಾಕ್ಕೆ ಕಳುಹಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ಯುದ್ಧವನ್ನು ಕೊನೆಗೊಳಿಸಲು ಪುಟಿನ್ ಹೊಸ ಷರತ್ತುಗಳನ್ನು ಪ್ರಸ್ತಾಪಿಸಿದ ಮತ್ತು ಭಾರತ, ಬ್ರೆಜಿಲ್ ಮತ್ತು ಚೀನಾ ಮಧ್ಯವರ್ತಿಗಳನ್ನು ವಹಿಸಬೇಕೆಂದು ಬಯಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಪುಟಿನ್ ಗೆ ಮೋದಿ ಕರೆ

ಆಗಸ್ಟ್ 27 ರಂದು ಪುಟಿನ್ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ ಅವರು ದೋವಲ್ ಅವರನ್ನು ರಷ್ಯಾಕ್ಕೆ ಕಳುಹಿಸುವುದಾಗಿ ಹೇಳಿದ್ದರು ಎಂದು ವರದಿಗಳು ಹೇಳಿವೆ. ಫೋನ್‌ನಲ್ಲಿ ಸಂವಾದದ ಸಮಯದಲ್ಲಿ ಮೋದಿ ಅವರು ಪುಟಿನ್ ಅವರ ಉಕ್ರೇನ್ ಭೇಟಿಯ ಬಗ್ಗೆ ವಿವರಿಸಿದರು ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಪರಿಹರಿಸುವ ತಮ್ಮ ಸರ್ಕಾರದ ಒತ್ತಡವನ್ನು ಪುನರುಚ್ಚರಿಸಿದರು ಎಂದು ರಷ್ಯಾದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದರು. ಈ ದೂರವಾಣಿ ಕರೆಯಲ್ಲಿ ದೋವಲ್ ಅವರನ್ನು ಶಾಂತಿ ಮಾತುಕತೆಗಾಗಿ ಮಾಸ್ಕೋಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಮಾತುಕತೆ, ರಾಜತಾಂತ್ರಿಕತೆಯ ಮೇಲೆ ಭಾರತದ ಒತ್ತಡ

ಮೋದಿಯವರ ಉಕ್ರೇನ್ ಭೇಟಿಯ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಯುದ್ಧದ ಬಗ್ಗೆ ಸರ್ಕಾರದ ನಿಲುವನ್ನು ವ್ಯಕ್ತಪಡಿಸಿತು. ಶಾಂತಿಯನ್ನು ಮರುಸ್ಥಾಪಿಸುವ ಯಾವುದೇ ಕಾರ್ಯಸಾಧ್ಯ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರ ಅಥವಾ ಸ್ವರೂಪವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿತ್ತು.

ಝೆಲೆನ್ಸ್ಕಿ ಅವರೊಂದಿಗಿನ ಭೇಟಿಯ ನಂತರ ಮೋದಿ ಅವರು ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಸಂಘರ್ಷವನ್ನು ಕೊನೆಗೊಳಿಸುವ ಭಾರತ ಸರ್ಕಾರದ ಸಲಹೆಯನ್ನು ನೀಡಿ, ಇದು ಯುದ್ಧದ ಯುಗವಲ್ಲ ಎಂದು ಪ್ರತಿಪಾದಿಸಿದರು.

ಶನಿವಾರ (ಸೆಪ್ಟೆಂಬರ್ 7), ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ರಷ್ಯಾ ಮತ್ತು ಉಕ್ರೇನ್ ನಡುವಿನ ಶಾಂತಿ ಮಾತುಕತೆಯಲ್ಲಿ ಭಾರತ ಮತ್ತು ಚೀನಾ ಎರಡೂ ಪ್ರಮುಖ ಮಧ್ಯವರ್ತಿಕೆ ವಹಿಸಬಹುದು ಎಂದು ಪ್ರತಿಪಾದಿಸಿದರು.

Read More
Next Story