ಶ್ರೀನಗರದಲ್ಲಿ ಆಪರೇಷನ್ ಮಹಾದೇವ್: ಮೂವರು ಉಗ್ರರ ಹತ್ಯೆ
x

ಶ್ರೀನಗರದಲ್ಲಿ 'ಆಪರೇಷನ್ ಮಹಾದೇವ್': ಮೂವರು ಉಗ್ರರ ಹತ್ಯೆ

ಹತ್ಯೆಯಾದ ಉಗ್ರರು ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸೋಮವಾರ (ಜುಲೈ 28) ಭದ್ರತಾ ಪಡೆಗಳು ನಡೆಸಿದ 'ಆಪರೇಷನ್ ಮಹಾದೇವ್' ಹೆಸರಿನ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹರ್ವಾನ್ ಪ್ರದೇಶದ ದಾಚಿಗಾಮ್ ರಾಷ್ಟ್ರೀಯ ಉದ್ಯಾನವನದ ಬಳಿ ಈ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ಖಚಿತಪಡಿಸಿದೆ.

ಖಚಿತ ಗುಪ್ತಚರ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು ಹರ್ವಾನ್ನ ಮುಲ್ನಾರ್ ಪ್ರದೇಶದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಮತ್ತು ಯೋಧರ ನಡುವೆ ಸಂಪರ್ಕ ಏರ್ಪಟ್ಟು, ತೀವ್ರ ಗುಂಡಿನ ಚಕಮಕಿ ಆರಂಭವಾಯಿತು.

ಈ ಬಗ್ಗೆ ಸಾಮಾಜಿಕ ಜಾಲತಾಣ 'X' ನಲ್ಲಿ ಮಾಹಿತಿ ನೀಡಿದ ಸೇನೆಯ ಚಿನಾರ್ ಕಾರ್ಪ್ಸ್, "ಆಪರೇಷನ್ ಮಹಾದೇವ್ - ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ," ಎಂದು ತಿಳಿಸಿದೆ.

ಹೆಚ್ಚುವರಿ ಭದ್ರತಾ ಪಡೆಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಆದರೆ, ಹತ್ಯೆಯಾದ ಉಗ್ರರು ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More
Next Story