ಪಿ. ಚಿದಂಬರಂ ಅವರ ಆರೋಗ್ಯದಲ್ಲಿ ಏರುಪೇರು: ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು
x

ಪಿ. ಚಿದಂಬರಂ ಅವರ ಆರೋಗ್ಯದಲ್ಲಿ ಏರುಪೇರು: ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು

ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿದೆ. ಸಭೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಕಾರ್ಯಕರ್ತರು ಮತ್ತು ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.


ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ. ಏಪ್ರಿಲ್ 08ರಂದು ಬೆಳಗ್ಗೆ ಸಾಬರಮತಿ ಆಶ್ರಮದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಪಕ್ಷದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದಾಗ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ. ತಕ್ಷಣವೇ ಅವರನ್ನು ಅಹಮದಾಬಾದ್‌ನ ಝೈದುಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿದಂಬರಂ ಅವರ ಪುತ್ರ ಹಾಗೂ ಸಂಸದ ಕಾರ್ತಿ ಚಿದಂಬರಂ ಅವರು ಈ ಬಗ್ಗೆ ಎಕ್ಸ್​ ಮೂಲಕ ಮಾಹಿತಿ ನೀಡಿದ್ದಾರೆ. ನನ್ನ ತಂದೆ ಚಿದಂಬರಂ ಅವರಿಗೆ ಅಹಮದಾಬಾದ್‌ನಲ್ಲಿ ತೀವ್ರವಾದ ತಾಪಮಾನ ಮತ್ತು ನಿರ್ಜಲೀಕರಣದಿಂದಾಗಿ ಪ್ರೆಸಿನ್​ಕೊಪಿ (presyncope) ಎಂಬ ತೀವ್ರ ಆರೋಗ್ಯ ಸಮಸ್ಯೆಯು ಎದುರಾಗಿದೆ. ಈಗ ಅವರು ಝೈದುಸ್​​ ಆಸ್ಪತ್ರೆಗೆ ದಾಖಲಾಗಿ ವೈದ್ಯರ ನಿಗಾಕ್ಕೆ ಒಳಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಪಿ. ಚಿದಂಬರಂ ಅವರು ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಗುಜರಾತ್‌ಗೆ ಹೋಗಿದ್ದರು. ಈ ಸಮಾವೇಶವು 64 ವರ್ಷಗಳ ನಂತರ ಗುಜರಾತ್‌ನಲ್ಲಿ ನಡೆಯುತ್ತಿದೆ. ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಸುಮಾರು 2,000 ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಸಾಬರಮತಿ ಆಶ್ರಮದಲ್ಲಿ ಪ್ರಾರ್ಥನಾ ಸಭೆ ನಡೆಯುತ್ತಿದ್ದ ವೇಳೆ ಅವರು ದಿಢೀರ್ ಕುಸಿದು ಬಿದ್ದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿದೆ. ಸಭೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಕಾರ್ಯಕರ್ತರು ಮತ್ತು ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಗುಜರಾತ್‌ನಲ್ಲಿ ಪ್ರಸ್ತುತ ತೀವ್ರ ಬಿಸಿಲು (ಏಪ್ರಿಲ್ 7 ರಂದು ತಾಪಮಾನ 43 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು) ಇದ್ದು ಹೀಗಾಗಿ ಅವರು ನಿತ್ರಾಣಗೊಂಡಿರಬಹುದು ಎಂದು ಹೇಳಲಾಗಿದೆ.

Read More
Next Story