ಸಂವಿಧಾನದ ಬಗ್ಗೆ ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ: ಪೇಜಾವರ ಶ್ರೀ
x
Pejavar Mutt seer

ಸಂವಿಧಾನದ ಬಗ್ಗೆ ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ: ಪೇಜಾವರ ಶ್ರೀ

ತಪ್ಪು ಮಾಹಿತಿ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯೇ ಅನಗತ್ಯ ಗೊಂದಲಕ್ಕೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಭಾರತೀಯ ಸಂವಿಧಾನದ ಬಗ್ಗೆ ತಾವು ನೀಡಿರುವ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ತಾವು ಸಂವಿಧಾನ ಬದಲಾವಣೆಗೆ ಎಂದಿಗೂ ಕರೆ ನೀಡಲಿಲ್ಲ. ಅದರ ತತ್ವಗಳಿಗೆ ತಮ್ಮ ಗೌರವವನ್ನು ಪುನರುಚ್ಚರಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ತಪ್ಪು ಮಾಹಿತಿ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯೇ ಅನಗತ್ಯ ಗೊಂದಲಕ್ಕೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

"ನಾನು ಸಂವಿಧಾನವನ್ನು ಗೌರವಿಸುತ್ತೇನೆ. ಅದರ ಸ್ಫೂರ್ತಿಗೆ ವಿರುದ್ಧವಾದ ಯಾವುದೇ ಉಪಕ್ರಮವನ್ನು ಎಂದಿಗೂ ಬೆಂಬಲಿಸುವುದಿಲ್ಲ" ಎಂದು ಅವರು ಹೇಳಿದರು.

ನವೆಂಬರ್ 23ರಂದು ಬೆಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಘಟಕ ಆಯೋಜಿಸಿದ್ದ 'ಸಂತರ ಸಮ್ಮೇಳನ'ದಲ್ಲಿ ಅವರು ಮಾಡಿದ ಭಾಷಣದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿತ್ತು. ಅಲ್ಲಿ ಅವರು ಬಹುಸಂಖ್ಯಾತರ ಹಿತಾಸಕ್ತಿಗಳನ್ನು ಗೌರವಿಸುವ ಸಂವಿಧಾನ ರಚಿಸಲು ಕರೆ ಕೊಟ್ಟಿದ್ದರು ಎಂದು ವರದಿಯಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದು ಸಾಂವಿಧಾನಿಕ ಬದಲಾವಣೆಯ ಬೇಡಿಕೆ ಎಂದು ಹೇಳಿಕೆ ನೀಡಿದ್ದರು.

ಸಮ್ಮೇಳನದ ನಂತರ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದ್ದ ಜ್ಞಾಪಕ ಪತ್ರದಲ್ಲಿ ಸಂವಿಧಾನದ ಬದಲಾವಣೆ ಬಗ್ಗೆ ಉಲ್ಲೇಖಿಸಿಲ್ಲ ಎಂದು ಶ್ರೀಗಳು ಸ್ಪಷ್ಟಪಡಿಸಿದರು.

ತಮ್ಮ ಹೇಳಿಕೆಗಳನ್ನು ಪರಿಶೀಲಿಸುವಂತೆ ಮತ್ತು ತಪ್ಪು ಮಾಹಿತಿ ಹರಡುವುದನ್ನು ತಪ್ಪಿಸಲು ಅವರು ಮಾಧ್ಯಮಗಳನ್ನು ಒತ್ತಾಯಿಸಿದರು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ನ ಟ್ರಸ್ಟಿಯೊಬ್ಬರು ಭಾರತೀಯ ಸಂವಿಧಾನದ ಬಗ್ಗೆ ತಮ್ಮ ಹೇಳಿಕೆಗಳನ್ನು ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀಗಳು, "ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ನೀಡಬೇಕಿತ್ತು. ಸರ್ಕಾರಗಳು ಎಲ್ಲರನ್ನೂ ಒಳಗೊಳ್ಳಬೇಕು ಮತ್ತು ಎಲ್ಲಾ ನಾಗರಿಕರನ್ನು ಸಮಾನವಾಗಿ ಪರಿಗಣಿಸಬೇಕು ಎಂದು ನಾನು ಒತ್ತಾಯಿಸಿದೆ. ಅಲ್ಪಸಂಖ್ಯಾತ ತುಷ್ಟೀಕರಣ ನಿಲ್ಲಬೇಕು. ಹಿಂದೂ ಹಿತಾಸಕ್ತಿಗಳನ್ನು ಬೆಂಬಲಿಸಿದ್ದಕ್ಕಾಗಿ ಕೆಲವು ಗುಂಪುಗಳು ತಮ್ಮನ್ನು ಗುರಿಯಾಗಿಸುತ್ತಿವೆ ಎಂದು ಅವರು ಆರೋಪಿಸಿದರು. ಇದೇ ವೇಳೆ ಮಾತನಾಡಿದ ಅವರು "ಹಿಂದೂಗಳ ಧ್ವನಿಯನ್ನು ಯಾರೂ ನಿಗ್ರಹಿಸಲು ಸಾಧ್ಯವಿಲ್ಲ" ಎಂದು ಪ್ರತಿಪಾದಿಸಿದರು.

Read More
Next Story