J & K Assembly Polls| ಪ್ರಧಾನಿ ನೇತೃತ್ವದಲ್ಲಿ ಬಿಜೆಪಿ ಪ್ರಚಾರ
ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಚಾರವನ್ನು ಮುನ್ನಡೆಸಲಿದ್ದಾರೆ.
ರಾಜ್ಯವನ್ನು ಆಗಸ್ಟ್ 2019 ರಲ್ಲಿ ಕೇಂದ್ರಾಡಳಿತ ಪ್ರದೇಶವಾಗಿ ಬದಲಿಸಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.
ಚುನಾವಣಾ ಆಯೋಗಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಲ್ಲಿಸಿರುವ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದ್ದಾರೆ.
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಮನೋಹರ್ ಲಾಲ್ ಖಟ್ಟರ್, ಜಿ. ಕಿಶನ್ ರೆಡ್ಡಿ, ಶಿವರಾಜ್ ಸಿಂಗ್ ಚೌಹಾಣ್, ಜಿತೇಂದ್ರ ಸಿಂಗ್, ಮಾಜಿ ಕೇಂದ್ರ ಸಚಿವರಾದ ಅನುರಾಗ್ ಠಾಕೂರ್, ಸ್ಮೃತಿ ಇರಾನಿ ಮತ್ತು ಜನರಲ್ ವಿ.ಕೆ. ಸಿಂಗ್, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಮತ್ತು ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಮ್ಮು- ಕಾಶ್ಮೀರದ ಚುನಾವಣೆ ಉಸ್ತುವಾರಿ ರಾಮ್ ಮಾಧವ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಜಮ್ಮು-ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ, ಸಂಸದ ಜುಗಲ್ ಕಿಶೋರ್ ಶರ್ಮಾ, ರಾಜ್ಯಸಭೆ ಸಂಸದ ಗುಲಾಂ ಅಲಿ ಖತಾನಾ, ಪ್ರಧಾನ ಕಾರ್ಯದರ್ಶಿ ಅಶೋಕ್ ಕೌಲ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಸೋಫಿ ಯೂಸುಫ್ ಪಟ್ಟಿಯಲ್ಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳ ವಿಧಾನಸಭೆ ಚುನಾವಣೆಯು ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ನಿಗದಿಯಾಗಿದೆ. ಮತಗಳ ಎಣಿಕೆ ಅಕ್ಟೋಬರ್ 4 ರಂದು ನಡೆಯಲಿದೆ.