ಒಮನ್‌ನಲ್ಲಿ ಮೇಳೈಸಿದ ಕರಾವಳಿಯ ಗಂಡುಕಲೆ ಯಕ್ಷಗಾನ- ಮೋದಿಗೆ ಅದ್ದೂರಿ ಸ್ವಾಗತ
x
ಪ್ರಧಾನಿ ನರೇಂದ್ರ ಮೋದಿ ಒಮನ್‌ ಪ್ರವಾಸ

ಒಮನ್‌ನಲ್ಲಿ ಮೇಳೈಸಿದ ಕರಾವಳಿಯ ಗಂಡುಕಲೆ ಯಕ್ಷಗಾನ- ಮೋದಿಗೆ ಅದ್ದೂರಿ ಸ್ವಾಗತ

ಒಮನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಲಿನ ಅನಿವಾಸಿ ಭಾರತೀಯರು ಭರ್ಜರಿಯಾಗಿಯೇ ಸ್ವಾಗತ ಕೋರಿದ್ದಾರೆ.


Click the Play button to hear this message in audio format

ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ಒಮನ್‌ಗೆ ಬಂದಿಳಿದಿದ್ದಾರೆ. ಎರಡು ದಿನಗಳ ಭೇಟಿಗಾಗಿ ಓಮನ್‌ಗೆ ಆಗಮಿಸಿದ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತ ಇದಾಗಿದ್ದು, ಈ ಸಂದರ್ಭದಲ್ಲಿ ಅವರು ದೇಶದ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಮಹತ್ವಾಕಾಂಕ್ಷೆಯ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ. ಓಮನ್‌ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

X ನಲ್ಲಿನ ಪೋಸ್ಟ್‌ನಲ್ಲಿ, ಮೋದಿ ಅವರು “ಭಾರತದೊಂದಿಗೆ ಶಾಶ್ವತ ಸ್ನೇಹ ಮತ್ತು ಆಳವಾದ ಐತಿಹಾಸಿಕ ಸಂಪರ್ಕಗಳ ಭೂಮಿಗೆ ಬಂದಿಳಿದಿದ್ದೇನೆ ಎಂದು ಹೇಳಿದರು. ಈ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಹೇಳಿದರು. ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ಓಮನ್‌ಗೆ ಭೇಟಿ ನೀಡುತ್ತಿದ್ದಾರೆ. ಇದು ಗಲ್ಫ್ ರಾಷ್ಟ್ರಕ್ಕೆ ಅವರ ಎರಡನೇ ಭೇಟಿಯಾಗಿದೆ.

ವಿಡಿಯೊ ಇಲ್ಲಿದೆ



ಯಕ್ಷಗಾನ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾಗತ

ಮಸ್ಕತ್ನಲ್ಲಿ ಭಾರತೀಯ ವಲಸಿಗರು ಪ್ರಧಾನಿಯವರಿಗೆ ಅದ್ದೂರಿ ಸ್ವಾಗತ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನೂ ಪ್ರದರ್ಶಿಸಲಾಗಿತ್ತು. ಯಕ್ಷಗಾನದ ತೆಂಕು ತಿಟ್ಟು ಪ್ರಕಾರ ಒಮನ್‌ನಲ್ಲಿ ಅದರಲ್ಲೂ ಪ್ರಧಾನಿ ಮೋದಿಯ ಎದುರು ಪ್ರದರ್ಶನಗೊಂಡಿರುವ ಬಗ್ಗೆ ಹಲವು ಕನ್ನಡಿಗರು ಸಂಸತ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯಕ್ಷಗಾನ ಪ್ರದರ್ಶನವನ್ನು ಅಲ್ಲಿ ಕನ್ನಡಿಗರು ಆಯೋಜಿಸಿದ್ದರು ಎನ್ನಲಾಗಿದೆ.

ಇದರ ಜೊತೆಗೆ ಹಿಂದಿ ಗೀತೆಗಳು, ಕೂಚಿಪುಡಿ ನೃತ್ಯವನ್ನು ಪ್ರದರ್ಶಿಸಿ ಮೋದಿಯನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಭಾರತೀಯರು ತ್ರಿವರ್ಣ ಧ್ವಜ ಹಿಡಿದು ‘ಮೋದಿ, ಮೋದಿ’, ‘ವಂದೇ ಮಾತರಂ’ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಘಾರ ಮಾಡಿದರು. ಹೋಟೆಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಭಾರತೀಯ ಅನಿವಾಸಿಗಳನ್ನು ಪ್ರಧಾನಿ ಮೋದಿ ಭೇಟಿಯಾಗಿ, ಅವರೊಂದಿಗೆ ಸಂವಾದ ನಡೆಸಿದರು. ಸ್ವಾಗತ ಸಮಾರಂಭದ ಭಾಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ಪ್ರದರ್ಶನಗಳನ್ನು ಸಹ ಅವರು ವೀಕ್ಷಿಸಿದರು.

Read More
Next Story