ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಅದನ್ನು ಅಂಗೀಕರಿಸಿದ್ದು, ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೆ ಮುಂದುವರಿಯುವಂತೆ ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ʻಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಸಚಿವ ಸಂಪುಟದೊಂದಿಗೆ ತಮ್ಮ ರಾಜೀನಾಮೆ ಸಲ್ಲಿಸಿ ದರು. ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೆ ಮುಂದುವರಿಯಲು ರಾಷ್ಟ್ರಪತಿ ವಿನಂತಿಸಿದ್ದಾರೆ,ʼ ಎಂದು ಪ್ರಕಟಣೆ ತಿಳಿಸಿದೆ.
ಕೇಂದ್ರ ಸಂಪುಟವು 17 ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿದೆ. ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದೆ.
Next Story