ಖಾಸಗಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರ ಸಾವು
x
ಪುಣೆಯಲ್ಲಿ ಹೆಲಿಕಾಪ್ಟರ್ ಪತನ

ಖಾಸಗಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರ ಸಾವು

ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ (ಅಕ್ಟೋಬರ್ 2) ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Click the Play button to hear this message in audio format

ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ (ಅಕ್ಟೋಬರ್ 2) ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಪುಣೆಯ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು. ಈ ವೇಳೆ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್‌ಗೆ ಸಮೀಪವಿರುವ ಬವ್ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದ ಬಳಿ ಬೆಳಿಗ್ಗೆ 6.45 ಕ್ಕೆ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಮೃತರಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಪತನಗೊಂಡ ಬಳಿಕ ಬೆಂಕಿ ಹೊತ್ತಿಕೊಂಡಿದೆ. ಆದರೆ ಅಪಘಾತಕ್ಕೆ ಕಾರಣ ಏನು ಎಂಬುವುದು ಇನ್ನು ತಿಳಿದುಬಂದಿಲ್ಲ. ಈ ಪ್ರದೇಶದಲ್ಲಿ ದಟ್ಟವಾದ ಮಂಜು ಬಿದ್ದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತದ ನಿಖರವಾದ ಕಾರಣವನ್ನು ನಿರ್ಧರಿಸಲು ಅಧಿಕೃತ ತನಿಖೆ ನಡೆಯುತ್ತಿದೆ. ಅಗ್ನಿಶಾಮಕ ದಳದ ವಾಹನಗಳೊಂದಿಗೆ ನಮ್ಮ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಕಮಿಷನರ್ ವಿನಯ್ ಕುಮಾರ್ ಚೌಬೆ ತಿಳಿಸಿದ್ದಾರೆ.

Read More
Next Story