ಪುಣೆ ಪೋರ್ಷ್‌ ಅಪಘಾತ| ಬಾಲಾಪರಾಧಿ ತಾಯಿ ಬಂಧನ
x

ಪುಣೆ ಪೋರ್ಷ್‌ ಅಪಘಾತ| ಬಾಲಾಪರಾಧಿ ತಾಯಿ ಬಂಧನ


ಪುಣೆ, ಜೂನ್ 1- ಪೋರ್ಷ್‌ ಕಾರು ಅಪಘಾತ ಪ್ರಕರಣದಲ್ಲಿ ಕಾನೂನಿನ ಜೊತೆ ಸಂಘರ್ಷದಲ್ಲಿರುವ ಬಾಲಕನ ರಕ್ತದ ಮಾದರಿಯನ್ನು ಆತನ ತಾಯಿಯ ರಕ್ತದೊಂದಿಗೆ ಬದಲಿಸಲಾಗಿದೆ ಎಂದು ಪುಣೆ ಪೊಲೀಸರು ದೃಢಪಡಿಸಿದ್ದು, ಅವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಮುಖ್ಯಸ್ಥರು ಶನಿವಾರ ತಿಳಿಸಿದ್ದಾರೆ.

ಬಾಲಾಪರಾಧಿ ರಕ್ತದ ಮಾದರಿಯನ್ನು ಆತನ ತಾಯಿಯ ರಕ್ತದಿಂದ ಬದಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದರು. ರಕ್ತದ ಮಾದರಿ ಬದಲಾವಣೆ ಬಗ್ಗೆ ಪೊಲೀಸರು ಎರಡು ದಿನಗಳ ಹಿಂದೆ ಸ್ಥಳೀಯ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

ಮೇ 19 ರ ಮುಂಜಾನೆ ಪುಣೆಯ ಕಲ್ಯಾಣಿ ನಗರದಲ್ಲಿ ಪೋರ್ಷ್‌ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಐಟಿ ವೃತ್ತಿಪರರು ಮೃತಪಟ್ಟಿದ್ದರು. 17 ವರ್ಷದ ಅಪ್ರಾಪ್ತ ವಯಸ್ಕ ಬಾಲಕನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸಲಾಗಿದೆ. ಆತನ ತಂದೆ, ರಿಯಲ್‌ ಎಸ್ಟೇಟ್‌ ಉದ್ಯಮಿ ವಿಶಾಲ್ ಅಗರ್ವಾಲ್ ಮತ್ತು ಅಜ್ಜ ಸುರೇಂದ್ರ ಅಗರ್ವಾಲ್ ಅವರನ್ನು ಬಂಧಿಸಲಾಗಿದೆ.

Read More
Next Story